ದಾವಣಗೆರೆ: ಗ್ರಾಮ ಪಂಚಾಯಿತಿ ಅಭಿವೃದ್ಧಿಗಾಗಿ ನಾವು ಕೆಲಸ ಮಾಡುತ್ತೇವೆ ಎಂದು ಜಿಲ್ಲೆಯ ಜಗಳೂರು ತಾಲೂಕಿನ ದೇವಿಕೆರೆ ಗ್ರಾಮ ಪಂಚಾಯಿತಿ ಸದಸ್ಯರು ಆಣೆ ಪ್ರಮಾಣ ಮಾಡಿರುವ ಘಟನೆ ನಡೆದಿದೆ.
ಆಸೆ ಆಮಿಷಕ್ಕೆ ಒಳಗಾಗದೆ ಬಾತಿ ಆಂಜನೇಯ ದೇವಸ್ಥಾನದಲ್ಲಿ ಗ್ರಾಪಂ ಅಧ್ಯಕ್ಷರ ಗಾದಿಗಾಗಿ ಯಾವುದೇ ಕೆಟಗರಿ ಬಂದರು ಒಟ್ಟಾಗಿ ಗ್ರಾಮದ ಅಭಿವೃದ್ಧಿ ಮಾಡಲು ಕೈ ಜೋಡಿಸುವುದಾಗಿ ಪ್ರಮಾಣ ಮಾಡಿದರು.
ಯಾವುದೇ ನಿರ್ಣಯ ಕೈಗೊಳ್ಳಬೇಕೆಂದರೆ ಮುಖಂಡರ ಜೊತೆ ಚರ್ಚಿಸಿ ನಿರ್ಧಾರ ಮಾಡುವುದಾಗಿ ಆಣೆ ಪ್ರಮಾಣ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ.