ETV Bharat / state

ಶುಭ ಸಮಾರಂಭಗಳಿಗೆ ಸ್ಥಳೀಯ ಆಡಳಿತದ ಅನುಮತಿ ಕಡ್ಡಾಯ: ತಹಶಿಲ್ದಾರ್

ಮದುವೆ ಹಾಗೂ ಇನ್ನಿತರ ಸಮಾರಂಭದ ಪ್ರವೇಶದ್ವಾರ ಹಾಗೂ ಸೂಕ್ತ ಸ್ಥಳಗಳಲ್ಲಿ ಸ್ಯಾನಿಟೈಸರ್‌ಗಳ ವ್ಯವಸ್ಥೆ ಮಾಡಬೇಕು. ಪ್ರತಿಯೊಬ್ಬರಿಗೂ ಪ್ರವೇಶದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು. ಶೀತ, ಕೆಮ್ಮು, ಉಸಿರಾಟದ ತೊಂದರೆ ಇರುವವರು ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬಾರದು ಎಂದು ತಹಶಿಲ್ದಾರ್​ ಕೆ.ಬಿ.ರಾಮಚಂದ್ರಪ್ಪ ತಿಳಿಸಿದ್ದಾರೆ.

Tahsildar KB Ramachandrappa
ತಹಶಿಲ್ದಾರ್ ಕೆ.ಬಿ.ರಾಮಚಂದ್ರಪ್ಪ
author img

By

Published : Jun 28, 2020, 1:39 PM IST

ಹರಿಹರ: ವಿವಾಹ ಹಾಗೂ ಇತರೆ ಸಮಾರಂಭಗಳನ್ನು ಆಯೋಜಿಸುವವರು ಕಡ್ಡಾಯವಾಗಿ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯಬೇಕು ಎಂದು ತಹಶಿಲ್ದಾರ್​ ಕೆ.ಬಿ.ರಾಮಚಂದ್ರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಆರೋಗ್ಯ ಇಲಾಖೆಯಿಂದ ಈ ಕುರಿತು ಮಾರ್ಗಸೂಚಿ ಬಂದಿದೆ. ಮದುವೆ, ಸಮಾರಂಭಗಳಿಗೂ ಮುನ್ನ ನಗರ, ಪಟ್ಟಣ, ಗ್ರಾಮಗಳಲ್ಲಿರುವವರು ಸ್ಥಳೀಯ ಆಡಳಿತದಿಂದ ಅನುಮತಿ ಪಡೆಯಬೇಕು. ಸಮಾರಂಭಗಳಲ್ಲಿ ಗರಿಷ್ಠ 50 ಜನರು ಮಾತ್ರ ಭಾಗವಹಿಸಬೇಕು. ಸೂಕ್ತವಾದ ಸಾರ್ವಜನಿಕ ಸ್ಥಳದಲ್ಲಿ ನೈಸರ್ಗಿಕ ಗಾಳಿ, ಬೆಳಕು ಲಭ್ಯವಿರುವಲ್ಲಿ (ಹವಾ ನಿಯಂತ್ರಣ ಎಸಿಯನ್ನು ಬಳಸಬಾರದು) ಸಮಾರಂಭಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.

ಕಂಟೈನ್​ಮೆಂಟ್​​ ವಲಯದ ವ್ಯಕ್ತಿಗಳು ಇಂತಹ ಸಮಾರಂಭಗಳಲ್ಲಿ ಪಾಲ್ಗೊಳ್ಳಲು ಅವಕಾಶವಿರುವುದಿಲ್ಲ. 65 ವರ್ಷ ಮೇಲ್ಪಟ್ಟವರು, 10 ವರ್ಷದೊಳಗಿನವರು, ಗರ್ಭಿಣಿಯರು ಪಾಲ್ಗೊಳ್ಳುವಂತಿಲ್ಲ. ಸಮಾರಂಭದ ಪ್ರವೇಶದ್ವಾರದಲ್ಲಿ ಹಾಗೂ ಸೂಕ್ತ ಸ್ಥಳಗಳಲ್ಲಿ ಸ್ಯಾನಿಟೈಸರ್‌ಗಳ ವ್ಯವಸ್ಥೆ ಮಾಡಬೇಕು. ಪ್ರತಿಯೊಬ್ಬರಿಗೂ ಪ್ರವೇಶದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು. ಶೀತ, ಕೆಮ್ಮು, ಉಸಿರಾಟದ ತೊಂದರೆ ಇರುವವರು ಪಾಲ್ಗೊಳ್ಳಬಾರದು ಎಂದು ಸೂಚಿಸಿದ್ದಾರೆ.

ಪ್ರತಿಯೊಬ್ಬರು ಮಾಸ್ಕ್‌ ಧರಿಸಬೇಕು. ಒಬ್ಬರಿಂದ ಇನ್ನೊಬ್ಬರಿಗೆ ಕನಿಷ್ಠ 1 ಮೀ. ದೈಹಿಕ ಅಂತರವಿರಬೇಕು. ಕೈಗಳನ್ನು ಸ್ವಚ್ಛಗೊಳಿಸಲು ಅನುಕೂಲವಾಗುವಂತೆ ಹ್ಯಾಂಡ್‌ವಾಷ್, ಟಿಶ್ಯು ಪೇಪರ್, ನೀರನ್ನು ಕೈತೊಳೆಯುವ ಸ್ಥಳದಲ್ಲಿ, ಶೌಚಾಲಯಗಳಲ್ಲಿ ಪೂರೈಸಬೇಕು. ಮದ್ಯಪಾನ, ಪಾನ್, ಗುಟ್ಕಾ, ತಂಬಾಕು ಸೇವನೆ ನಿಷೇಧಿಸಬೇಕು ಎಂದರು.

ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು.ಸಮಾರಂಭಗಳಲ್ಲಿ ಪಾಲ್ಗೊಂಡವರ ಹೆಸರು, ಸಂಪರ್ಕ ಸಂಖ್ಯೆ, ಕಡ್ಡಾಯವಾಗಿ ದಾಖಲಿಸಬೇಕು. ಭಾಗವಹಿಸುವ ಎಲ್ಲಾ ಅತಿಥಿಗಳು ಗೂಗಲ್ ಪ್ಲೇ ಸ್ಟೋರ್‌ನಿಂದ ಆರೋಗ್ಯ ಸೇತು ಆಪ್‌ ಡೌನ್‌ಲೋಡ್ ಮಾಡಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.