ETV Bharat / state

ದುರ್ಗಾಂಬಿಕೆ ಹಾಗೂ ಉಚ್ಚೆಂಗೆಮ್ಮ ದೇವಿಯರ ದರ್ಶನಕ್ಕೆ ಸಕಲ ಸಿದ್ಧತೆ.. - latest davanagere news

ಸೋಮವಾರದಿಂದ ದೇವರ ದರ್ಶನಕ್ಕೆ ಅನುಮತಿ ನೀಡಿರುವುದರಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಿಳಿ ಬಣ್ಣದ ಪಟ್ಟಿ ಬಳಿಯಲಾಗಿದೆ. ಭಕ್ತರು ದೇವಾಲಯಕ್ಕೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.

Davanagere
ದಾವಣಗೆರೆ
author img

By

Published : Jun 7, 2020, 7:06 PM IST

ದಾವಣಗೆರೆ : ನಗರದ ಪ್ರಸಿದ್ಧ ದೇವಸ್ಥಾನಗಳಾದ ಶ್ರೀ ದುರ್ಗಾಂಬಿಕೆ ಹಾಗೂ ಶ್ರೀ ಉಚ್ಚಂಗಿದುರ್ಗದ ಉಚ್ಚೆಂಗೆಮ್ಮ ದೇವಿ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ಕಳೆದ 80 ದಿನಗಳಿಂದ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಇದೀಗ ಸರ್ಕಾರ ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿರುವ ಹಿನ್ನೆಲೆ ದೇವಾಲಯ ಶುಚಿಗೊಳಿಸುವ ಹಾಗೂ ಸ್ಯಾನಿಟೈಸರ್ ಸಿಂಪಡಣೆ ಮಾಡುವ ಕಾರ್ಯ ಭರದಿಂದ ಸಾಗಿದೆ.

ಸೋಮವಾರದಿಂದ ದೇವರ ದರ್ಶನಕ್ಕೆ ಅನುಮತಿ ನೀಡಿರುವುದರಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಿಳಿ ಬಣ್ಣದ ಪಟ್ಟಿ ಬಳಿಯಲಾಗಿದೆ. ಭಕ್ತರು ದೇವಾಲಯಕ್ಕೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು. ಕಾಯಿಲೆಯಿಂದ ಬಳಲುತ್ತಿರುವವರು, ವೃದ್ಧರು ಹಾಗೂ ಪುಟ್ಟ ಮಕ್ಕಳನ್ನು ಕರೆದುಕೊಂಡು ಬರಬಾರದು ಎಂದು ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.