ದಾವಣಗೆರೆ : ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಕೆಳಗೋಟೆಯಲ್ಲಿ ನಡೆದಿದೆ.
ಕಾಟಪ್ಪ(54) ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ. ಕೊಂಡುಕುರಿ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ಕೆಳಗೋಟೆ ಗ್ರಾಮದಲ್ಲಿ ಕಾಟಪ್ಪ ತನ್ನ ರಾಸುಗಳನ್ನು ಮೇಯಿಸಲು ಹೋಗಿದ್ದ ವೇಳೆ ಕರಡಿ ದಾಳಿ ಮಾಡಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಕಾಟಪ್ಪರನ್ನು ಜಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇತ್ತೀಚೆಗೆ ಕರಡಿ ಹಾವಳಿ ಹೆಚ್ಚಾಗಿದ್ದು, ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.