ETV Bharat / state

ಎಂ ಪಿ ರೇಣುಕಾಚಾರ್ಯ ಕಾಂಗ್ರೆಸ್ ಸೇರಲ್ಲ, ಸೌಹಾರ್ದಯುತ ಭೇಟಿ ಅಷ್ಟೇ: ಸಚಿವ ಎಸ್​ ಎಸ್​ ಮಲ್ಲಿಕಾರ್ಜುನ್‌

ಎಂ ಪಿ ರೇಣುಕಾಚಾರ್ಯ ಅವರು ಕಾಂಗ್ರೆಸ್​ ಸೇರುವುದಿಲ್ಲ ಎಂದು ಸಚಿವ ಎಸ್​ ಎಸ್​ ಮಲ್ಲಿಕಾರ್ಜುನ್​ ತಿಳಿಸಿದ್ದಾರೆ.

ಸಚಿವ ಎಸ್​ ಎಸ್​ ಮಲ್ಲಿಕಾರ್ಜುನ್​ ಅವರನ್ನು ಭೇಟಿಯಾದ ರೇಣುಕಾಚಾರ್ಯ

author img

By ETV Bharat Karnataka Team

Published : Aug 27, 2023, 6:06 PM IST

ಸಚಿವ ಎಸ್​ ಎಸ್​ ಮಲ್ಲಿಕಾರ್ಜುನ್​

ದಾವಣಗೆರೆ : ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಕಾಂಗ್ರೆಸ್ ಸೇರಲ್ಲ. ಸೌಹಾರ್ದಯುತ ಭೇಟಿ ಅಷ್ಟೇ. ಎಲ್ಲರನ್ನೂ ಕಂಡಿದ್ದರು. ನನ್ನ ಬಳಿ ಬಂದಿದ್ದರು. ಟೀ ಕುಡಿದರು, ವಿಶ್ ಮಾಡಿ ಹೋದ್ರು. ಇದಕ್ಕೆ ರಾಜಕೀಯ ಅರ್ಥ ಬೇಡ, ಟೀ ಕುಡಿಸಿ ಕಳುಹಿಸಿದ್ದೇನೆ. ಬೇರೆ ಏನೂ ಚರ್ಚೆ ಆಗಿಲ್ಲ ಎಂದು ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ರೇಣುಕಾಚಾರ್ಯ ಭೇಟಿ ಬಗ್ಗೆ ತಿಳಿಸಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಪಕ್ಷದ ಬಗ್ಗೆ ಮಾತನಾಡಿದ್ರು, ಯಡಿಯೂರಪ್ಪಗೆ ಬಿಜೆಪಿ ಅನ್ಯಾಯ ಮಾಡಿತು ಅಂದ್ರು. ದಾವಣಗೆರೆಯಿಂದ ಲೋಕಸಭೆ ಬಿಜೆಪಿ ಆಕಾಂಕ್ಷಿ ಎಂದು ರೇಣುಕಾಚಾರ್ಯ ಹೇಳಿದ್ರು. ಇನ್ನು ನನಗೂ ಚನ್ನಗಿರಿ ಶಾಸಕ ಬಸವರಾಜ್ ವಿ ಶಿವಗಂಗಾ ಜೊತೆ ವೈಮನಸ್ಸಿಲ್ಲ. ನನ್ನ ಫೋನ್​ಗೆ ಕರೆ ಮಾಡಿಲ್ಲ ಎಂದರು.

ರೇಣುಕಾಚಾರ್ಯ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಯಾರೂ ಮಾತನಾಡಿಲ್ಲ. ಡಿ ಕೆ ಶಿವಕುಮಾರ್ ನನಗೆ ಕರೆ ಮಾಡಿಲ್ಲ. ಗೊತ್ತೂ ಇಲ್ಲ, ಈ ಸಂಬಂಧ ನನಗೆ ಯಾರೂ ಮಾತನಾಡಿಲ್ಲ. ರೇಣುಕಾಚಾರ್ಯ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತನಾಡಿಲ್ಲ. ಬೇರೆ ಯಾರಾದರೂ ಕಾಂಗ್ರೆಸ್​ಗೆ ಬಂದರೆ ಸ್ವಾಗತಿಸುತ್ತೇವೆ. ತತ್ವ, ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ. ಪ್ರಭಾ ಮಲ್ಲಿಕಾರ್ಜುನ್ ಸ್ಪರ್ಧೆ ಬಗ್ಗೆ ಯೋಚನೆ ಇಲ್ಲ, ಈ ಬಗ್ಗೆ ಚರ್ಚೆ ಆಗಿಲ್ಲ. ಕಾಂಗ್ರೆಸ್​ನಲ್ಲಿ ಬಹಳಷ್ಟು ಜನರಿದ್ದಾರೆ ಎಂದರು.

ಇನ್ನು, ಪತ್ನಿ ಪ್ರಭಾ ಮಲ್ಲಿಕಾರ್ಜುನ ಅವರು ಲೋಕಸಭಾ ಚುನಾವಣೆ ಅಭ್ಯರ್ಥಿನಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಜಗಳೂರು ಶಾಸಕ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ ಕುಟುಂಬ ಆಹ್ವಾನ ಮಾಡಿತ್ತು. ಜಗಳೂರಿಗೆ ಪ್ರಭಾ ಮಲ್ಲಿಕಾರ್ಜುನ್ ಹೋಗಿದ್ದರು. ವರಮಹಾಲಕ್ಷ್ಮೀ ಪೂಜೆಗೆ ಆಹ್ವಾನದ ಮೇರೆಗೆ ಹೋಗಿದ್ದರು ಅಷ್ಟೇ. ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದರು.

ಇನ್ನು, ಬಿಜೆಪಿಯವರು ಮಾಡಿದ ಹೊಸ ಯೋಜನೆಗಳು ಯಾವೂ ಇಲ್ಲ. ಕುಂದುವಾಡ ಕೆರೆ ಹಾಳು ಮಾಡಿದ್ದಾರೆ. ಶೇಕಡಾ 40ರಷ್ಟು ಕಮಿಷನ್ ಪಡೆದು ಹಾಳು ಮಾಡಿದ್ದಾರೆ. ಬರಪೀಡಿತ ಪ್ರದೇಶಗಳ ಘೋಷಣೆಗೆ ಕೇಂದ್ರ ಸರ್ಕಾರದ ಸಹಕಾರ ಅಗತ್ಯ. ರಾಜ್ಯ ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತದೆ. ಕೇಂದ್ರ ಸರ್ಕಾರದ ಸಹಕಾರ ಬೇಕು ಎಂದು ತಿಳಿಸಿದರು.

ನಾನು ಕಾಂಗ್ರೆಸ್​ಗೆ ಹೋಗುತ್ತೇನೆ ಎಂದು ಎಲ್ಲೂ ಹೇಳಿಲ್ಲ: ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್​ ಸೇರುವುದಿಲ್ಲ, ನನ್ನನ್ನು ಅವರು ಕರೆದೂ ಇಲ್ಲ, ನಾನು ಹೋಗುತ್ತೇನೆ ಎಂದು ಎಲ್ಲೂ ಹೇಳಿಲ್ಲಾ ಎಂದು ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯರವರು ಕಾಂಗ್ರೆಸ್ ಸೇರುತ್ತಾರೆ ಎಂಬ ಗೊಂದಲಕ್ಕೆ (26-8-2023) ತೆರೆ ಎಳೆದಿದ್ದರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ್ದ ಅವರು, ಹೊನ್ನಾಳಿ ನ್ಯಾಮತಿ ಅವಳಿ ತಾಲೂಕನ್ನು ಬರಪಟ್ಟಿಗೆ ಸೇರಿಸುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದೇನೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಮೂರು ಬಾರಿ ಶಾಸಕನಾಗಿದ್ದೇನೆ. ನನ್ನ ಕ್ಷೇತ್ರದ ಜನರ ಋಣವನ್ನು ತೀರಿಸಲು ಕಾಂಗ್ರೆಸ್ ನಾಯಕರ ಬಳಿ ತೆರಳಿ ಮಾಜಿ ಶಾಸಕನಾಗಿ ನನ್ನ ಕರ್ತವ್ಯವನ್ನು ಮಾಡಿದ್ದೇನೆ ಎಂದಿದ್ದರು.

ಇದನ್ನೂ ಓದಿ: ಸಿಎಂ, ಡಿಸಿಎಂ ಭೇಟಿಯಾದ ರೇಣುಕಾಚಾರ್ಯ; ಕುತೂಹಲ ಮೂಡಿಸಿದ ಬಿಎಸ್​ವೈ ಆಪ್ತನ ನಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.