ETV Bharat / state

ಸರ್ಕಾರ ಶಿಷ್ಯ ವೇತನ ನೀಡಲ್ಲ, ಆಡಳಿತ ಮಂಡಳಿಯೇ ನೀಡಬೇಕು: ಸಚಿವ ಭೈರತಿ ಬಸವರಾಜ್​​ - ವಿದ್ಯಾರ್ಥಿಗಳ ಶಿಷ್ಯ ವೇತನ ಸರ್ಕಾರ ನೀಡಲ್ಲ

ಜೆಜೆಎಂ ಕಾಲೇಜಿನ ವೈದ್ಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಶಿಷ್ಯ ವೇತನವನ್ನು ರಾಜ್ಯ ಸರ್ಕಾರ ನೀಡುವುದಿಲ್ಲ. ಕಾಲೇಜಿನ ಆಡಳಿತ ಮಂಡಳಿಯೇ ಭರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಸ್ಪಷ್ಟಪಡಿಸಿದ್ದಾರೆ.

should not pay the scholarship
ಭೈರತಿ ಬಸವರಾಜ್
author img

By

Published : Jul 4, 2020, 5:12 PM IST

ದಾವಣಗೆರೆ: ಜೆಜೆಎಂ ಕಾಲೇಜಿನ ವೈದ್ಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಶಿಷ್ಯ ವೇತನವನ್ನು ರಾಜ್ಯ ಸರ್ಕಾರ ನೀಡುವುದಿಲ್ಲ. ಕಾಲೇಜಿನ ಆಡಳಿತ ಮಂಡಳಿಯೇ ಭರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಸ್ಪಷ್ಟಪಡಿಸಿದ್ದಾರೆ.

ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಶುಕ್ರವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಶಾಮನೂರು ಶಿವಶಂಕರಪ್ಪ ಸೇರಿದಂತೆ ಅಧಿಕಾರಿಗಳ ಜೊತೆ ಈ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಶಿಷ್ಯ ವೇತನವನ್ನು ರಾಜ್ಯ ಸರ್ಕಾರ ನೀಡಲು ಸಾಧ್ಯವಿಲ್ಲ. ಆಡಳಿತ ಮಂಡಳಿ ಭರಿಸಬೇಕು ಎಂಬುದಕ್ಕೆ ಶಾಮನೂರು ಶಿವಶಂಕರಪ್ಪ ಅವರು ಕೂಡ ಒಪ್ಪಿಗೆ ನೀಡಿದ್ದಾರೆ ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಭೈರತಿ ಬಸವರಾಜ್

ಆರೋಗ್ಯ ಸಚಿವ ಬಿ.ಶ್ರೀರಾಮುಲು ಮಾತನಾಡಿ, ಈ ವಿಚಾರ ಸಂಬಂಧ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. ಜೆಜೆಎಂ ಕಾಲೇಜಿನ ಆಡಳಿತ ಮಂಡಳಿಯೇ ಶಿಷ್ಯ ವೇತನ ನೀಡಬೇಕು. ಸರ್ಕಾರದ ವತಿಯಿಂದ ಕೊಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.