ದಾವಣಗೆರೆ : ಚಾಕುವಿನಿಂದ ಇರಿದು ಯುವಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ನಡೆದಿದೆ.
ಹೊನ್ನಾಳಿ ಪಟ್ಟಣದ ಗ್ಯಾರೇಜ್ ವೊಂದರಲ್ಲಿ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ದಯಾನತ್ ಖಾನ್ ಕೊಲೆಗೀಡಾದ ಯುವಕ. ದಯಾನತ್ ಹೊಟ್ಟೆಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಇದರಿಂದ ತೀವ್ರ ರಕ್ತಸ್ರಾವಗೊಂಡ ದಯಾನತ್ ಖಾನ್ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ. ಜೆ. ಉದೇಶ್, ಹೊನ್ನಾಳಿ ಗ್ರಾಮಾಂತರ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇನ್ನು ಪ್ರಕರಣ ದಾಖಲಿಸಿಕೊಂಡಿರುವ ಹೊನ್ನಾಳಿ ಪೊಲೀಸರು ಹಂತಕರ ಪತ್ತೆಗೆ ಬಲೆ ಬೀಸಿದ್ದಾರೆ. ಯುವತಿಯೊಬ್ಬಳನ್ನು ದಯಾನತ್ ಖಾನ್ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಹತ್ಯೆ ನಡೆದಿರಬಹುದು ಎಂಬ ಶಂಕೆಯೂ ವ್ಯಕ್ತವಾಗಿದೆ.