ದಾವಣಗೆರೆ: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವುದಿಲ್ಲ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದ ನಿಟ್ಟುವಳ್ಳಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಶಿವಸೇನೆಯು ಎನ್ ಸಿಪಿ ಹಾಗೂ ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚನೆ ಮಾಡಿದೆ. ಆದ್ರೆ ಇಲ್ಲಿ ಅದು ಆಗುವುದಿಲ್ಲ. ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ, ನಾನು ಸರ್ಕಾರ ಬೀಳಿಸೋದಿಲ್ಲ ಎಂದು ಹೇಳುತ್ತಾರೆ, ಮತ್ತೊಂದೆಡೆ ಅನರ್ಹರು ಸೋಲಬೇಕೆಂದು ಹೇಳುತ್ತಾರೆ. ಈ ಮೂಲಕ ದ್ವಂದ್ವ ಚುನಾವಣಾ ರಾಜಕಾರಣ ಪ್ರಾರಂಭ ಮಾಡಿದ್ದಾರೆ. ಭವಿಷ್ಯದಲ್ಲಿ ಕಾಂಗ್ರೆಸ್, ಜೆಡಿಎಸ್‌ಗೆ ಅಸ್ತಿತ್ವವೇ ಇರುವುದಿಲ್ಲ. ಬಿಜೆಪಿಗೆ ಭವಿಷ್ಯ ಇದೆ, ಜನರ ಆಶೀರ್ವಾದ ಇದೆ ಎಂದರು.
ಉಪ ಚುನಾವಣೆಯಲ್ಲಿ ಬಿಜೆಪಿಯವರು ಕೋಟ್ಯಂತರ ರೂಪಾಯಿ ಹಣ ಚೆಲ್ಲುತ್ತಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ರಾಮುಲು, ಇದೆಲ್ಲಾ ಬಡಾಯಿಗೋಸ್ಕರ ಆಡುವಂತಹ ಮಾತು. ನಿನ್ನೆ ಹುಣಸೂರಿನಲ್ಲಿ ಕಾಂಗ್ರೆಸ್ ನ ಕೋಟ್ಯಂತರ ರೂಪಾಯಿ ಸೀಜ್ ಆಯ್ತು. ಕಾಂಗ್ರೆಸ್ ನ ಭ್ರಷ್ಟಾಚಾರದ ಹಣ ಇಡೀ 15 ಕ್ಷೇತ್ರದಲ್ಲಿ ಓಡಾಡುತ್ತಿದೆ ಎಂದು ಆರೋಪಿಸಿದರು.