ETV Bharat / state

ನನ್ನ ವಿರುದ್ಧ ದೂರು ಕೊಟ್ಟವರು ಎಂಟಿಆರ್ ಫುಡ್ ಇರ್ಬೇಕು: ಸ್ವಪಕ್ಷೀಯರಿಗೆ ರೇಣುಕಾಚಾರ್ಯ ಟಾಂಗ್

author img

By

Published : Feb 2, 2022, 3:50 PM IST

ಬೀದಿಯಲ್ಲಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ರೇ ಸಚಿವ ಸ್ಥಾನ ಸಿಗುತ್ತಾ? ಅನುಭವ ಇದೆ, ಮೂರು ಬಾರಿ ಗೆದ್ದಿದ್ದೇನೆ. ಹಾಗಾಗಿ ಸಚಿವ ಸ್ಥಾನ ಕೊಡಿ ಎಂದು ಕೇಳಿದ್ದೇನೆ. ಅಷ್ಟೇ ಅಲ್ಲದೇ ಯಾರೋ ನನ್ನ ವಿರುದ್ಧ ದೂರು ಕೊಟ್ಟಿದ್ದಾರೆ. ಅವರು ಎಂಟಿಆರ್ ಫುಡ್ ಇರ್ಬೇಕು. ಆದ್ರೆ ನಾನು ಎಂಟಿಆರ್ ಫುಡ್ ಅಲ್ಲ, ಎನ್ನುವ ಮೂಲಕ ಸ್ವಪಕ್ಷೀಯರಿಗೆ ಶಾಸಕ ರೇಣುಕಾಚಾರ್ಯ ಟಾಂಗ್ ಕೊಟ್ಟಿದ್ದಾರೆ.

MLA Renukacharya
ಸ್ವಪಕ್ಷೀಯರಿಗೆ ರೇಣುಕಾಚಾರ್ಯ ಟಾಂಗ್

ದಾವಣಗೆರೆ: ಯಾರು ನನ್ನ ವಿರುದ್ಧ ದೂರು ಕೊಟ್ಟಿದ್ದಾರೆ. ಅವರು ಎಂಟಿಆರ್ ಫುಡ್ ಇರ್ಬೇಕು. ಆದ್ರೆ ನಾನು ಎಂಟಿಆರ್ ಫುಡ್ ಅಲ್ಲವೆಂದು ಹೇಳುವ ಮೂಲಕ ಸ್ವಪಕ್ಷೀಯ ಸಚಿವರಿಗೆ ಹೊನ್ನಾಳಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಟಾಂಗ್ ಕೊಟ್ಟಿದ್ದಾರೆ.

ಸ್ವಪಕ್ಷೀಯರಿಗೆ ರೇಣುಕಾಚಾರ್ಯ ಟಾಂಗ್

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾದಿ ಬೀದಿಯಲ್ಲಿ ಹೋರಾಟ ಮಾಡಿಯೇ ಮೂರು ಬಾರಿ ಶಾಸಕನಾಗಿದ್ದೇನೆ. ಬೀದಿಯಲ್ಲಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ರೇ ಸಚಿವ ಸ್ಥಾನ ಸಿಗುತ್ತಾ ಎಂದು ಪಕ್ಷದ ಸಚಿವರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಅವಕಾಶ ಕೊಡಲೇಬೇಕೆಂದು ಕೇಳಿದ್ದೇನೆ. ಅನುಭವ ಇದೆ, ಮೂರು ಬಾರಿ ಗೆದ್ದಿದ್ದೇನೆ. ಹಾಗಾಗಿ ಸಚಿವ ಸ್ಥಾನ ಕೊಡಿ ಎಂದು ಕೇಳಿದ್ದೇನೆ ಎಂದರು.

ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ವಿಚಿತ್ರ ಘಟನೆ: ಮನೆ ಕಾಂಪೌಂಡ್​ನಲ್ಲೇ ಶವ ಸಂಸ್ಕಾರ, ಸ್ಥಳೀಯರಿಂದ ಭಾರಿ ವಿರೋಧ- ಕಲ್ಲು ತೂರಾಟ!

ಮೂರು ದಿನ ದೆಹಲಿ ಪ್ರವಾಸ: ಎರಡು ದಿನಗಳ ಹಿಂದೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಫೋನ್ ಮಾಡಿದ್ದರು. ಬಹಿರಂಗ ಹೇಳಿಕೆ ಕೊಡಬೇಡಿ, ಅದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಆಗುತ್ತದೆ ಎಂದಿದ್ದಾರೆ.‌‌ ಅಲ್ಲದೇ ದೆಹಲಿಗೆ ಬರಲು ಹೇಳಿದ್ದಾರೆ. ಇದೇ ಫೆ.8, 9,10 ರಂದು ದೆಹಲಿಗೆ ಬರುವಂತೆ ತಿಳಿಸಿದ್ದಾರೆ. ಅರುಣ್ ಸಿಂಗ್​​ರನ್ನ ಭೇಟಿ ಮಾಡಿ ಎಲ್ಲ ವಿಚಾರಗಳ ಬಗ್ಗೆ ಮಾತನಾಡಲಿದ್ದೇನೆ. ನಾನು ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡಿದ್ದೇನೆ. ನನ್ನ ತಪ್ಪಿದ್ದರೆ ವರಿಷ್ಠರು ಯಾವುದೇ ಕ್ರಮ‌ಬೇಕಾದ್ರೂ ಕೈಗೊಳ್ಳಲಿ ಎಂದು ಹೇಳಿದ್ರು.

ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಈ ಬಾರಿ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಹಾಗೂ ರಾಜ್ಯಾಧ್ಯಕ್ಷರ ಗಮನಕ್ಕೆ ತಂದಿದ್ದೇನೆ. ಸಿಎಂ ಕೂಡ ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮೂರು ಸಲ ಶಾಸಕ ಆಗಿದ್ದೇನೆ. ಸಚಿವ ಸ್ಥಾನ ನಿಭಾಯಿಸುವ ಶಕ್ತಿ ಹೊಂದಿರುವೆ‌. ನಾನು ದೆಹಲಿಗೆ ಹೋಗುವ ಬಗ್ಗೆ ಶಾಸಕ ಯತ್ನಾಳ್ ಜೊತೆ ಮಾತನಾಡಿಲ್ಲ, ಬಳಿಕ ಯತ್ನಾಳ್​ರೊಂದಿಗೆ ಮಾತನಾಡುವೆ ಎಂದು ರೇಣುಕಾಚಾರ್ಯ ಸ್ಪಷ್ಟಪಡಿಸಿದರು.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.