ETV Bharat / state

ದಾವಣಗೆರೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ, ಮೂರು ಪಾಸಿಟಿವ್​ ಕೇಸ್​! - ಮೂರು ಕೊರೊನಾ ಪಾಸಿಟಿವ್ ಪ್ರಕರಣಗಳು

ದಾವಣಗೆರೆ ಜಿಲ್ಲೆಯಲ್ಲಿ ಇಂದು ಮೂರು ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ.

Three Corona Positive Cases detected in davanagere
ದಾವಣಗೆರೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ
author img

By

Published : Jul 6, 2020, 11:33 PM IST

ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದು, ಮೃತರ ಸಂಖ್ಯೆ 12ಕ್ಕೇರಿದೆ. ಇಂದು ಮೂರು ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ.

ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಭಾರತಿ ನಗರದ ನಿವಾಸಿಯಾದ 49 ವರ್ಷದ ಪುರುಷನನ್ನು ದಾವಣಗೆರೆ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆತ ತೀವ್ರ ಕಾಯಿಲೆಯಿಂದ ಬಳಲುತ್ತಿದ್ದು, ಗಂಟಲು ದ್ರವ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಇದೀಗ ವರದಿ ಬಂದಿದ್ದು, ಮೃತನಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಚನ್ನಗಿರಿಯಲ್ಲಿ ಐಎಲ್ಐನಿಂದ ಬಳಲುತ್ತಿದ್ದ 59 ವರ್ಷದ ಪುರುಷ, ಹರಿಹರದ 28 ವರ್ಷದ ಮಹಿಳೆ ಹಾಗೂ ಆಂಧ್ರಪ್ರದೇಶದ ರಾಯದುರ್ಗದಿಂದ ಬಂದಿದ್ದ 63 ವರ್ಷದ ವೃದ್ಧರಿಗೆ ಕೊರೊನಾ ವೈರಸ್ ತಗುಲಿದೆ.

ದಾವಣಗೆರೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ

ಇನ್ನು ಹತ್ತು ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ದಾವಣಗೆರೆಯಲ್ಲಿ ಆರು, ಹೊನ್ನಾಳಿ ಮೂರು, ಚನ್ನಗಿರಿಯ ಒಬ್ಬರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 338 ಮಂದಿ ಕೊರೊನಾ ವೈರಸ್​ನಿಂದ ಸಂಪೂರ್ಣವಾಗಿ ಗುಣಮುಖರಾದಂತಾಗಿದೆ. 36 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.