ETV Bharat / state

ಜಗಳೂರು: ಎರಡು ಪ್ರತ್ಯೇಕ ಬೈಕ್ ಅಪಘಾತದಲ್ಲಿ ಮೂವರು ಸಾವು - confrontation between the bike

ಮಲೆಮಾಚಿಕೆರೆ ಗ್ರಾಮದ ಅರಣ್ಯ ಇಲಾಖೆಯ ದಿನಗೂಲಿ ನೌಕರ ಕರಿಬಸವ ಹಾಗೂ ಕ್ಯಾಸೇನಹಳ್ಳಿ ಗ್ರಾಮದ ಹನುಮಂತಪ್ಪ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮನ್ಸೂರ್ ಎಂಬಾತ ಸಾವನಪ್ಪಿದ್ದಾನೆ.

Three killed in two bike accidents in Jagaloor
ಜಗಳೂರು: ಎರಡು ಪ್ರತ್ಯೇಕ ಬೈಕ್ ಅಪಘಾತದಲ್ಲಿ ಮೂವರು ಸಾವು
author img

By

Published : Aug 5, 2020, 7:29 PM IST

ದಾವಣಗೆರೆ: ಜಗಳೂರು ತಾಲೂಕಿನಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತದಲ್ಲಿ ಮೂವರು ಸಾವನಪ್ಪಿದ್ದು, ಓರ್ವ ಗಾಯಗೊಂಡಿದ್ದಾನೆ. ಜಗಳೂರು ಹೊರವಲಯದ ಕೊಟ್ಟೂರು ರಸ್ತೆಯಲ್ಲಿ ಸಂಭವಿಸಿದ ಬೈಕ್​​​ಗಳ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸಾವನಪ್ಪಿ ಓರ್ವ ಗಾಯಗೊಂಡಿದ್ದಾನೆ.

ಮಲೆಮಾಚಿಕೆರೆ ಗ್ರಾಮದ ಅರಣ್ಯ ಇಲಾಖೆಯ ದಿನಗೂಲಿ ನೌಕರ ಕರಿಬಸವ ಹಾಗೂ ಕ್ಯಾಸೇನಹಳ್ಳಿ ಗ್ರಾಮದ ಹನುಮಂತಪ್ಪ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕ್ಕಮ್ಮನಹಟ್ಟಿ ತಿರುವು ಸಮೀಪ ಈ ಅಪಘಾತ ಸಂಭವಿಸಿದ್ದು, ಬೈಕ್​​​ಗಳು ಸಂಪೂರ್ಣ ನುಜ್ಜುಗುಜ್ಕಾಗಿವೆ.

ಇನ್ನೂ ಜಗಳೂರಿನ ಗೌರಿಪುರ ಕ್ರಾಸ್​ ಬಳಿ ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಬೈಕ್ ಸವಾರ ಮನ್ಸೂರ್ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಈತ ಗ್ರಾಮೀಣ ಸ್ವಸಹಾಯ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.