ದಾವಣಗೆರೆ: ಬೈಕ್ಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊನ್ನೇಭಾಗಿ ಗ್ರಾಮದ ಬಳಿ ನಡೆದಿದೆ.
ಅಜ್ಜಯ್ಯ (18) ಮಂಜುನಾಥ್ (17) ದೇವರಾಜ್ (17) ಮೃತ ದುರ್ದೈವಿಗಳು. ಗಣಪತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು ಚನ್ನಗಿರಿಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಮೃತ ಯುವಕರೆಲ್ಲರೂ ಚನ್ನಗಿರಿ ತಾಲೂಕಿನ ಮಲ್ಲೇಶಪುರ ಗ್ರಾಮದ ನಿವಾಸಿಗಳೆಂದು ತಿಳಿದುಬಂದಿದೆ.

ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಮತ್ತೋರ್ವ ಶಿವಮೊಗ್ಗ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ. ಚನ್ನಗಿರಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನು ಬೊಲೆರೊ ಕಾರಿನಲ್ಲಿದ್ದವರಿಗೆ ಏನಾಗಿದೆ ಎಂಬುದು ಹಾಗು ಚಾಲಕನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ:ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ಯುವಕರ ದುರ್ಮರಣ