ETV Bharat / state

ನ್ಯಾಮತಿ ತಾಲೂಕಿನಲ್ಲಿ ತಂಬಾಕು ನಿಯಂತ್ರಣ ತನಿಖಾ ದಳ ದಾಳಿ - ದಾವಣಗೆರೆ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳ

ನ್ಯಾಮತಿ ತಾಲೂಕಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ, 19 ಪ್ರಕರಣಗಳನ್ನು ದಾಖಲಿಸಿದ್ದಾರೆ.

Tobacco Control Investigation Team
ನ್ಯಾಮತಿ ತಾಲೂಕಿನಲ್ಲಿ ತಂಬಾಕು ನಿಯಂತ್ರಣ ತನಿಖಾ ದಳ ದಾಳಿ
author img

By

Published : Jan 29, 2020, 8:17 PM IST

ದಾವಣಗೆರೆ: ನ್ಯಾಮತಿ ತಾಲೂಕಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ, 19 ಪ್ರಕರಣಗಳನ್ನು ದಾಖಲಿಸಿದ್ದಾರೆ. ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಂಡ ರಚಿಸಿ, ದಾಳಿ ನಡೆಸಿ 1,900 ರೂಪಾಯಿ ದಂಡವನ್ನು ಸ್ಥಳದಲ್ಲಿಯೇ ಸಂಗ್ರಹಿಸಿದ್ದಾರೆ.

ಹೊನ್ನಾಳಿ ಪಟ್ಟಣದ ನ್ಯಾಮತಿ ರಸ್ತೆಯ ಸುತ್ತಮುತ್ತಲಿನ ಹೊಟೇಲ್, ಬಾರ್ ಆ್ಯಂಡ್​ ರೆಸ್ಟೋರೆಂಟ್, ಪಾನ್‍ಶಾಪ್ ಸೇರಿದಂತೆ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದ್ದಾರೆ.

ಅಲ್ಲದೇ, ಸಾರ್ವಜನಿಕ ಸ್ಥಳದಲ್ಲಿನ ಅಂಗಡಿಗಳ ಮಾಲೀಕರು ಧೂಮಪಾನ ನಿಷೇಧದ ಬಗ್ಗೆ ಪ್ರದರ್ಶಿಸಬೇಕಾದ ಫಲಕಗಳನ್ನು ಕಟ್ಟುನಿಟ್ಟಾಗಿ ಅಳವಡಿಸಲು ತಾಕೀತು ಮಾಡಿದ್ದಾರೆ. ತಂಡದಲ್ಲಿ ಆಡಳಿತ ವೈದ್ಯಾಧಿಕಾರಿ ಡಾ. ಆರ್.ಎಂ ಮೆಣಸಿನಕಾಯಿ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಸತೀಶ್, ಹಿರಿಯ ಆರೋಗ್ಯ ಸಹಾಯಕ ನಿಂಗಪ್ಪ. ಎಂ. ಬಿ, ಶಿಕ್ಷಣ ಇಲಾಖೆಯ ಮಹಾಂತೇಶ, ನ್ಯಾಮತಿ ಪೊಲೀಸ್ ಠಾಣೆಯ ಹೇಮಾನಾಯ್ಕ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.