ETV Bharat / state

ಚನ್ನಗಿರಿಯಲ್ಲಿ ತಂಬಾಕು ನಿಯಂತ್ರಣ ಅಧಿಕಾರಿಗಳ ದಾಳಿ: 28 ಪ್ರಕರಣ ದಾಖಲು - ತಂಬಾಕು ನಿಯಂತ್ರಣಾ ತನಿಖಾ ತಂಡ

ತಂಬಾಕು ನಿಯಂತ್ರಣಾ ತನಿಖಾ ತಂಡವು ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್ 4 ರಡಿ ಸೇರಿ ಒಟ್ಟು 28 ಪ್ರಕರಣಗಳನ್ನು ದಾಖಲಿಸಿ 2,800 ರೂ. ದಂಡವನ್ನು ಸ್ಥಳದಲ್ಲಿಯೇ ಸಂಗ್ರಹಿಸಿತು.

Channagiri
ತಂಬಾಕು ನಿಯಂತ್ರಣ ಅಧಿಕಾರಿ
author img

By

Published : Sep 1, 2020, 7:11 PM IST

ದಾವಣಗೆರೆ: ಚನ್ನಗರಿ ಪಟ್ಟಣದ ವಿವಿಧೆಡೆ ದಾಳಿ ನಡೆಸಿದ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ಅಧಿಕಾರಿಗಳು ತಂಬಾಕು ಸೇವನೆ ಮಾಡುತ್ತಿದ್ದ ಹಾಗೂ ಮಾರಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಕೊಂಡಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ತಾಲೂಕು ಆಡಳಿತ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಇವರ ಸಹಯೋಗದೊಂದಿಗೆ ಈ ವಿಶೇಷ ಕಾರ್ಯಾಚರಣೆ ನಡೆಸಲಾಯಿತು.

ತಂಬಾಕು ನಿಯಂತ್ರಣಾ ತನಿಖಾ ತಂಡವು ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್ 4 ರಡಿ 16 ಹಾಗೂ ಸೆಕ್ಷನ್ 6ಎ ಅಡಿಯಲ್ಲಿ 12 ಪ್ರಕರಣ ಸೇರಿದಂತೆ ಒಟ್ಟು 28 ಪ್ರಕರಣಗಳನ್ನು ದಾಖಲಿಸಿ 2,800 ರೂ. ದಂಡವನ್ನು ಸ್ಥಳದಲ್ಲಿಯೇ ಸಂಗ್ರಹಿಸಿತು. ಚನ್ನಗಿರಿ ಪಟ್ಟಣದ ಬಸ್ ನಿಲ್ದಾಣದ ಸುತ್ತಮುತ್ತಲಿನ ಹೊಟೇಲ್, ಬಾರ್ ಆ್ಯಂಡ್ ರೆಸ್ಟೋರೆಂಟ್, ಪಾನ್‍ಶಾಪ್ ಸೇರಿದಂತೆ ಇತರೆ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಲಾಯಿತು.

ತಂಡದಲ್ಲಿ ಚನ್ನಗಿರಿ ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಭು. ಬಿ. ಎಂ. ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರರದ ಸತೀಶ ಕಲಹಾಳ, ಸಾಮಾಜಿಕ ಕಾರ್ಯಕರ್ತ ಕೆ. ಪಿ. ದೇವರಾಜ್, ಹಿರಿಯ ಆರೋಗ್ಯ ಸಹಾಯಕ ಅಶೋಕ.ಎಂ, ಪುರಸಭೆಯ ಆರೋಗ್ಯ ನಿರೀಕ್ಷಕ ಶಿವರುದ್ರಪ್ಪ, ಪೊಲೀಸ್ ಸಿಬ್ಬಂದಿ ಕಾಜಿ ಸೇರಿದಂತೆ ಇತರರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.