ದಾವಣಗೆರೆ: ಟ್ರಾಫಿಕ್ ಪೊಲೀಸರು ಹಾಗೂ ಬೈಕ್ ಸವಾರರ ನಡುವೆ ಮಾತಿನ ಚಕಮಕಿ ನಡೆದು ಪೊಲೀಸರು ಬೈಕ್ ಸವಾರನಿಗೆ ಥಳಿಸಿದ ಘಟನೆ ನಗರದ ವಿದ್ಯಾನಗರದ ಬಿಐಟಿ ರಸ್ತೆಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬಿಐಟಿ ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಬೈಕ್ ಸವಾರನನ್ನು ತಡೆದರು. ದಾಖಲಾತಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಸರಿಯಾದ ಮಾಹಿತಿ ನೀಡಲಿಲ್ಲ. ಈ ವೇಳೆ ಪೊಲೀಸರನ್ನು ಅವಾಚ್ಯ ಶಬ್ಧಗಳಿಂದ ಬೈಕ್ ಸವಾರ ನಿಂದಿಸಿದ್ದಾನೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ಪೊಲೀಸ್ ಪೇದೆ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿದ್ದು, ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದಾರೆ. ಈಗ ಈ ವಿಡಿಯೋ ವೈರಲ್ ಆಗುತ್ತಿದೆ.
ಬೈಕ್ ಸವಾರನಿಗೆ ಕಾಲಿನಿಂದ ಒದ್ದು ಟ್ರಾಫಿಕ್ ಪೊಲೀಸ್ ಹಲ್ಲೆ ನಡೆಸುತ್ತಿದ್ದ ದೃಶ್ಯ ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿದೆ.