ದಾವಣಗೆರೆ: ಏಳು ವರ್ಷದ ಬಾಲಕನೊಂದಿಗೆ ಅಸ್ವಾಭಾವಿಕ ಸಂಭೋಗ ನಡೆಸಿದ ಪ್ರಕರಣದಲ್ಲಿ ತೃತಿಯ ಲಿಂಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ದಾವಣಗೆರೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.
ನಗರದ ಜಾಲಗಾರ ಓಣಿಯ ನಿವಾಸಿ ಅನುಪಮ (22) ಎಂಬ ತೃತಿಯ ಲಿಂಗಿಯನ್ನು ಬಂಧಿಸಲಾಗಿದೆ. ಇತ್ತೀಚೆಗೆ ನಗರದ ಪಾರ್ಕ್ವೊಂದರಲ್ಲಿ ಆಟವಾಡುತ್ತಿದ್ದ 7 ವರ್ಷದ ಬಾಲಕನೊಬ್ಬ ಬಳಿಕ ಅಳುತ್ತ ಮನೆಗೆ ತೆರಳಿದ್ದ. ನಂತರ ಆತನನ್ನು ವಿಚಾರಿಸಿದ ಪೋಷಕರು ದೌರ್ಜನ್ಯ ಎಸಗಿರುವ ಬಗ್ಗೆ ತಿಳಿದು ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಐಪಿಸಿ ಸೆಕ್ಷನ್ 377, 4ರಡಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ತೃತಿಯ ಲಿಂಗಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಹಾವೇರಿ: ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ