ದಾವಣಗೆರೆ: ಬುಲೆರೋ ವಾಹನ ಎರಡು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಂಕಿಕೆರೆಯಲ್ಲಿ ನಡೆದಿದೆ.
ಚನ್ನಗಿರಿ ತಾಲೂಕಿನ ಬೆಂಕಿಕೆರೆ ಕ್ರಾಸ್ ಬಳಿ ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಂತೋಷ್( 30) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಅದೇ ವೇಗದಲ್ಲಿ ನುಗ್ಗಿದ ಕಾರು ಚಾಲಕ, ಚನ್ನಗಿರಿಯ ನವಚೇತನ ಶಾಲೆಯ ಮುಂಭಾಗ ಮತ್ತೊಂದು ಬೈಕ್ಗೆ ಡಿಕ್ಕಿ ಹೊಡೆದಿದ್ದಾನೆ. ಶಿವಮೊಗ್ಗ ಮೂಲದ ಜ್ಞಾನೇಶ್ವರ (22) ಎಂಬಾತ ಸಾವಿಗೀಡಾಗಿದ್ದು, ಇನ್ನೋರ್ವ ಗಾಯಗೊಂಡಿದ್ದಾನೆ.
ಗಾಯಗೊಂಡ ಸವಾರರನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬುಲೆರೋ ವಾಹನ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.