ETV Bharat / state

ಎರಡು ಗುಂಪಿನ ನಡುವೆ ಮಾರಾಮಾರಿ: ಮೂವರಿಗೆ ಗಾಯ, ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿದ್ದಾರೆ ಎಂದು ಆರೋಪಿಸಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಗಲಾಟೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

author img

By

Published : Feb 10, 2022, 10:47 AM IST

ಎರಡು ಗುಂಪಿನ ನಡುವೆ ಮಾರಾಮಾರಿ
ಎರಡು ಗುಂಪಿನ ನಡುವೆ ಮಾರಾಮಾರಿ

ದಾವಣಗೆರೆ: ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ನಡೆದಿದೆ.

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿದ್ದಾರೆ ಎಂದು ಆರೋಪಿಸಿ, ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಒಂದು ಗುಂಪು ಮನೆಯೊಂದಕ್ಕೆ ನುಗ್ಗಿ ಅಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದು, ಗಲಾಟೆಯಲ್ಲಿ ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆಗೊಳಗಾದವರನ್ನು ಚನ್ನಗಿರಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸಪಟ್ಟರು. ‌

ಸಿಸಿಟಿವಿ ದೃಶ್ಯ

ಇದನ್ನೂ ಓದಿ: ಬೆಂಗಳೂರು ಸಂಚಾರ ದಟ್ಟಣೆ ಶೇ 32ರಷ್ಟು ಇಳಿಮುಖ: ಎಲೆಕ್ಟ್ರಿಕ್ ವಾಹನ ಖರೀದಿ ಹೆಚ್ಚಳ

ಪೊಲೀಸರು ನಲ್ಲೂರು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದು, ಎರಡು ಕೋಮಿನ ಮುಖಂಡರನ್ನು ಕರೆಯಿಸಿ ಸಭೆ ನಡೆಸಿದ್ದಾರೆ. ಇಂದು ಪ್ರತಿಭಟನೆ ನಡೆಯುವ ಸಾಧ್ಯತೆ ದಟ್ಟವಾಗಿದ್ದು, ಗಲಾಟೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.