ದಾವಣಗೆರೆ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಆರೋಪಿಗಳನ್ನು ದಾವಣಗೆರೆ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಂತರಾಮ್ ತರ್ಕಿ(21) ಹಾಗೂ ಮಧುರಾಜ್(40) ಬಂಧಿತ ಆರೋಪಿಗಳು. ಬಂಧಿತರಿಂದ 2.10 ಲಕ್ಷ ರೂ. ಮೌಲ್ಯದ 8 ಕೆಜಿ 600 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.
ದಾವಣಗೆರೆ ನಗರದ ಬಾಡಾ ಕ್ರಾಸ್ ಬಳಿ ಗಾಂಜಾ ಮಾರಾಟ ಮಾಡುವಾಗ ಸಿಇಎನ್ ಪೊಲೀಸರು ದಾಳಿ ನಡೆಸಿದ್ದಾರೆ. ಈ ಬಗ್ಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಪತ್ನಿ, ಅಳಿಯನ ಮೇಲಿನ ದ್ವೇಷಕ್ಕೆ ರಾಕ್ಷಸಿ ಕೃತ್ಯ..ಮಲಗಿದ್ದ 6 ಜೀವಗಳನ್ನ ಜೀವಂತ ಸುಟ್ಟ ನರಹಂತಕ..