ಹರಿಹರ : ಮನೆ ಮುಂದೆ ನಿಂತಿದ್ದ ಸ್ಕೂಟರ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ವಿಕೃತಿ ಮೆರೆದಿರುವ ಘಟನೆ ನಗರದಲ್ಲಿ ನಡೆದಿದೆ.
ತಾಲೂಕಿನ ಸಾರ್ವಜನಿಕ ಆಸ್ಪತ್ರೆಯ ಹತ್ತಿರದಲ್ಲಿರುವ ಪ್ರಭಾಕರ್.ಎಸ್ ಎಂಬುವರ ಮನೆ ಮುಂದೆ ಸ್ಕೂಟರ್ ನಿಲ್ಲಿಸಿದ್ದರು. ಈ ವೇಳೆ ಯಾರೋ ಕಿಡಿಗೇಡಿಗಳು ಮನೆ ಎದುರು ನಿಲ್ಲಿಸಿದ್ದ ಸ್ಕೂಟರ್‌ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಧಗಧಗನೆ ಉರಿಯುತ್ತಿದ್ದ ಬೆಂಕಿಯನ್ನು ಕಂಡ ಆಸ್ಪತ್ರೆ ಸಿಬ್ಬಂದಿ ತಕ್ಷಣ ಪ್ರಭಾಕರ್ ಮನೆಯವರಿಗೆ ತಿಳಿಸಿ ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ.
![burnt scooter](https://etvbharatimages.akamaized.net/etvbharat/prod-images/5094486_thjpg.jpg)
ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಡಿವೈಎಸ್‌ಪಿ ಮಂಜುನಾಥ್ ಗಂಗಲ್, ಸಿಪಿಐ ಶಿವಪ್ರಸಾದ್, ಪಿಎಸ್‌ಐ ಡಿ.ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.