ದಾವಣಗೆರೆ : ವಾಲ್ಮೀಕಿ ಸಮಾಜಕ್ಕೆ ಶೇ.7.5 ಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಪ್ರೀಡಂ ಪಾರ್ಕ್ ಬಳಿ ನಾಳೆಯಿಂದಲೇ(10.02.2022) ಧರಣಿ ಸತ್ಯಾಗ್ರಹ ನಡೆಸಲು ವಾಲ್ಮೀಕಿ ಸ್ವಾಮೀಜಿ ನಿರ್ಧಾರ ಮಾಡಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಪ್ರಸನಾನಂದಪುರಿ ಸ್ವಾಮೀಜಿಯವರು ಮಾತನಾಡಿ, ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಮೀಸಲಾತಿ ಕಲ್ಪಿಸುವುದಾಗಿ ಭರವಸೆ ನೀಡಿದ್ದರು. ನಿವೃತ್ತ ನ್ಯಾ. ನಾಗಮೋಹನ್ ದಾಸ್ ವರದಿ ಬಳಿಕ ಮೀಸಲಾತಿ ಕಲ್ಪಿಸುವುದಾಗಿ ಹೇಳಿದ್ದರು.
ನಾಗಮೋಹನ್ ದಾಸ ವರದಿ ಸರ್ಕಾರಕ್ಕೆ ಸಲ್ಲಿಕೆ ಆಗಿದೆ. ಆದರೆ, ನಿರ್ಧಾರ ಮಾತ್ರ ಸರ್ಕಾರ ತೆಗೆದುಕೊಳ್ಳುತ್ತಿಲ್ಲ. ಇದೇ ಕಾರಣಕ್ಕೆ ನಮ್ಮ ಸಮಾಜದವರೇ ನನ್ನ ಬಗ್ಗೆ ಬೇಸರ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಭಾವನೆ ವ್ಯಕ್ತಪಡಿಸುತ್ತಿದ್ದಾರೆ.
ಇದರಿಂದ ನನ್ನ ಮನಸ್ಸಿಗೆ ಬೇಸರವಾಗಿದೆ. ನಮ್ಮ ಸಮಾಜಕ್ಕೆ ಮೀಸಲಾತಿ ಸಿಗುವತನಕ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಯಲಿದೆ. ನನ್ನ ಸಮಾಜಕ್ಕೆ ಶೇ. 7.5 ಮೀಸಲಾತಿ ಪ್ರಕಟಣೆ ಆಗುವ ತನಕ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಸರ್ಕಾರಕ್ಕೆ ಸ್ವಾಮೀಜಿ ಖಡಕ್ ಎಚ್ಚರಿಕೆ ನೀಡಿದರು.
ಓದಿ: ಮುಂದಿನ ದಿನಗಳಲ್ಲಿ ಈ ಧ್ವಜ ಸಹ ರಾಷ್ಟ್ರ ಧ್ವಜ ಆಗಬಹುದು: ಸಚಿವ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ