ದಾವಣಗೆರೆ: ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ವೀರೇಶ ಹನಗವಾಡಿ ಅವರನ್ನು ನೇಮಕ ಮಾಡಲಾಗಿದೆ.
ಕಳೆದ ಮೂರು ವರ್ಷಗಳಿಂದ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಯಶವಂತರಾವ್ ಜಾಧವ್ ಕಾರ್ಯನಿರ್ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ಅಧ್ಯಕ್ಷರಾಗಿದ್ದ ವೀರೇಶ ಹನಗವಾಡಿ ಅವರು ಬಿಜೆಪಿ ಪಕ್ಷದ ವಿವಿಧ ಘಟಕಗಳಲ್ಲಿ ಕೆಲಸ ಮಾಡಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನಾಲ್ವರು ಆಕಾಂಕ್ಷಿಗಳಿದ್ದರು. ಆದ್ರೆ, ಅಂತಿಮವಾಗಿ ವೀರೇಶ ಹನಗವಾಡಿ ಅವರನ್ನು ನೇಮಕ ಮಾಡಿ ರಾಜ್ಯ ಬಿಜೆಪಿ ಆದೇಶ ಹೊರಡಿಸಿದೆ.