ದಾವಣಗೆರೆ: ಬೆಂಗಳೂರಿನ ಕೆ.ಜಿ.ಹಳ್ಳಿ, ಡಿ.ಜಿ.ಹಳ್ಳಿಯಲ್ಲಿ ನಡೆದ ಗಲಭೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವೇದಿಕೆಯ ಕಾರ್ಯಕರ್ತರು, ಕೆಲ ಸಂಘಟನೆಗಳ ವಿರುದ್ಧ ಘೋಷಣೆ ಕೂಗದರು. ಈ ಗಲಭೆ ಪೂರ್ವನಿಯೋಜಿತವಾಗಿದ್ದು, ಪಿ.ಎಫ್.ಐ, ಎಸ್.ಡಿ.ಪಿ.ಐ ಸಂಘಟನೆ ಸದಸ್ಯರ ಕೈವಾಡ ಕಂಡು ಬಂದಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.
ಈ ಗಲಭೆಗೆ ಕಾರಣವಾದ ಸಂಘಟನೆಗಳನ್ನು ಸಿಎಂ ಯಡಿಯೂರಪ್ಪ ನಿಷೇಧಿಸಬೇಕು. ಗಲಭೆಯಿಂದ ಹಾನಿಗೊಳಗಾದ ಸಾರ್ವಜನಿಕ ಆಸ್ತಿ ಮೊತ್ತವನ್ನು ಆರೋಪಿಗಳಿಂದಲೇ ಭರಿಸಬೇಕು. ಗಲಭೆ ಮಾಡಿದವರಿಗೆ ಹಣ ಹಂಚಿಕೆ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಜಮೀರ್ ಅಹ್ಮದ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.