ETV Bharat / state

ದಾವಣಗೆರೆ.. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಆಗಬೇಕು: ರೇಣುಕಾಚಾರ್ಯ - ಕಾವೇರಿ ನೀರಿಗಾಗಿ ಕರ್ನಾಟಕ ಬಂದ್

ಯಡಿಯೂರಪ್ಪ ಅವರ ಕಣ್ಣೀರಿನಿಂದ ಬಿಜೆಪಿ ಹಾಳಾಗಿದೆ‌, ವಿಜಯೇಂದ್ರ ಯುವ ಮೋರ್ಚಾದ ರಾಜ್ಯಾಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡಿದ್ದಾರೆ, ರಾಜ್ಯದ ಎಲ್ಲ ಕಡೆ ಓಡಾಡಿ ಸಂಘಟನೆ ಮಾಡಿದ್ದಾರೆ. ಆದ್ದರಿಂದ ರಾಜ್ಯಾಧ್ಯಕ್ಷ ಸ್ಥಾನವನ್ನು ವಿಜಯೇಂದ್ರಗರ ನೀಡಬೇಕು ಎಂದು ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.

MP Renukacharya spoke to the media in Davangere.
ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಎಂಪಿ ರೇಣುಕಾಚಾರ್ಯ ಮಾತನಾಡಿದರು.
author img

By ETV Bharat Karnataka Team

Published : Sep 29, 2023, 3:42 PM IST

Updated : Sep 29, 2023, 4:32 PM IST

ಮಾಧ್ಯಮದವರೊಂದಿಗೆ ಮಾಜಿ ಶಾಸಕ ರೇಣುಕಾಚಾರ್ಯ ಮಾತನಾಡಿದರು.

ದಾವಣಗೆರೆ:ಮಾಜಿ ಸಿಎಂ ಯಡಿಯೂರಪ್ಪ ಅವರಂತೆ ಅವರ ಪುತ್ರ ವಿಜಯೇಂದ್ರ ರಾಜ್ಯಾಧ್ಯಕ್ಷ ಆಗಬೇಕು, ಯಡಿಯೂರಪ್ಪ ಪುತ್ರನೆಂದೂ ಆ ಹುದ್ದೆ ಕೊಡಬೇಡಿ, ಅತನ ಸಂಘಟನೆ ಕಾರ್ಯ ನೋಡಿ‌ ಕೊಡ್ಬೇಕು ಎಂದು ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕರನ್ನು ಇನ್ನೂ ಆಯ್ಕೆ ಮಾಡಿಲ್ಲ, ಬಿಜೆಪಿ ರಾಜ್ಯಾಧ್ಯಕ್ಷ ನೈತಿಕ ಹೊಣೆ ಹೊತ್ತು ರಾಜೀನಾಮೆ ‌ನೀಡಿಲ್ಲ, ಆತ್ಮಾವಲೋಕನ ಮಾಡಿಕೊಂಡು ಮುನ್ನಡೆದರೆ ಬಿಜೆಪಿಗೆ ಒಳಿತು. ಅದನ್ನು ಬಿಟ್ಟು ಮೋದಿ ಅವರ ಹೆಸರು ಹೇಳಿಕೊಂಡು ಹೋಗುತ್ತಿದ್ದಾರೆ, ಇಲ್ಲಿ ಅದನ್ನು ಮತಗಳಾಗಿ ಪರಿವರ್ತನೆ ಮಾಡೋದು ರಾಜ್ಯ ನಾಯಕರ ಕರ್ತವ್ಯ, ಬಿಜೆಪಿ 10 ವರ್ಷ ಬರಬಾರದು ಎಂದು ನಮ್ಮ ನಾಯಕರೇ ಹೀಗೆ ಮಾಡಿರಬಹುದು, ಬಿಜೆಪಿಗೆ ಸಮರ್ಥ ನಾಯಕತ್ವ ಬೇಕಾಗಿದೆ ಎಂದು ಅವರು ಪ್ರತಿಪಾದನೆ ಮಾಡಿದ್ದಾರೆ.

ಯಡಿಯೂರಪ್ಪ ಅವರ ಕಣ್ಣೀರಿನಿಂದ ಬಿಜೆಪಿ ಹಾಳಾಗಿದೆ‌, ವಿಜಯೇಂದ್ರ ಯುವ ಮೋರ್ಚಾದ ರಾಜ್ಯಾಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡಿದ್ದಾರೆ. ರಾಜ್ಯದ ಎಲ್ಲ ಕಡೆ ಓಡಾಡಿ ಸಂಘಟನೆ ಮಾಡಿದ್ದಾರೆ. ಆದ್ದರಿಂದ ರಾಜ್ಯಾಧ್ಯಕ್ಷ ಸ್ಥಾನವನ್ನು ವಿಜಯೇಂದ್ರ ಅವರಿಗೇ ನೀಡಬೇಕು ಎಂದು ರೇಣುಕಾಚಾರ್ಯ ಆಗ್ರಹಿಸಿದರು.

ಬಿಜೆಪಿ- ಜೆಡಿಎಸ್ ಮೈತ್ರಿಗೆ ಅಸಮಾಧಾನ: ಎಂಪಿ ರೇಣುಕಾಚಾರ್ಯ ಅವರು ಬಿಜೆಪಿ- ಜೆಡಿಎಸ್ ಮೈತ್ರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಬಿಜೆಪಿ ಕಾರ್ಯಕರ್ತರಿಗೆ ಅಸ್ತಿತ್ವದ ಪ್ರಶ್ನೆಯಾಗುತ್ತದೆ, ಒಂದು ಪಕ್ಷದ ವಿರುದ್ದ ನಾವು ಮೈತ್ರಿಯಾಗಬಾರದು. ರಾಜ್ಯದ ಅಭಿವೃದ್ಧಿಗೆ ಮೈತ್ರಿ ಮಾಡಿಕೊಂಡು ಒಂದಾಗಬೇಕು. ನೆಲ ಜಲದ ವಿಚಾರದ ಬಗ್ಗೆ ಮೈತ್ರಿಯಾಗಬೇಕು. ಅದನ್ನು ಬಿಟ್ಟು ಒಂದು ಸರ್ಕಾರ, ಪಕ್ಷವನ್ನು ಸೋಲಿಸಲು ಒಂದಾಗೋದು ಸರಿಯಲ್ಲ. ಹೀಗೆ ರೇಣುಕಾಚಾರ್ಯ ಅವರು ಜೆಡಿಎಸ್ ಬಿಜೆಪಿ ಮೈತ್ರಿ ಬಗ್ಗೆ ವಿರುದ್ದ ಅಸಮಾಧಾನ ಹೊರಹಾಕಿದರು.

ಕಾವೇರಿ ನೀರಿಗಾಗಿ ಕರ್ನಾಟಕ ಬಂದ್ : ಕಾವೇರಿ ನೀರಿಗಾಗಿ ಹಲವು ಸಂಘಟನೆಗಳು ಬೆಂಬಲದೊಂದಿಗೆ ಇಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಇಂಥ ಬರಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುವ ಅವಶ್ಯಕತೆ ಇರಲಿಲ್ಲ. ಯಾವುದೇ ಕಾರಣಕ್ಕೂ ನೀರನ್ನು ಬಿಡಬಾರದು. ಕೇಂದ್ರ ಸರ್ಕಾರವೇ ಇರಲಿ ರಾಜ್ಯ ಸರ್ಕಾರ ಇರಬಹುದು ಇಬ್ಬರಿಗೂ ಒತ್ತಾಯ ಮಾಡುವೆ. ಪ್ರತಿ ವರ್ಷ ಇದೇ ರೀತಿಯೂ ಪ್ರತಿಭಟನೆ‌, ಕರ್ನಾಟಕ ಬಂದ್ ಮಾಡಬೇಕಾಗುತ್ತದೆ ಎಂದು ತಿಳಿಸಿದರು.

ತಮಿಳುನಾಡು ಸರ್ಕಾರಕ್ಕೆ ಎಚ್ವರಿಕೆ ನೀಡುತ್ತೇನೆ . ಕಾಂಗ್ರೆಸ್ ಬಗ್ಗೆ ಸಾಫ್ಟ್ ಕಾರ್ನಾರ್ ತೋರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ನಾನೇನು ಕಾಂಗ್ರೆಸ್ ವಕ್ತಾರ ಅಲ್ಲ. ಬರದಿಂದಾಗಿ ರಾಜ್ಯದ ರೈತರು, ಜನ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರ ಕೂಡಲೇ ಬರ ಪರಿಹಾರ ನೀಡಬೇಕು. ಬೆಳೆ ಹಾನಿಯಾದ ಬೆಳೆಗಳಿಗೆ ಸೂಕ್ತ ಪರಿಹಾರ ನೀಡಬೇಕು. ರೈತರ ಪರವಾಗಿ ಸರ್ಕಾರ ಇಂದು ನಿಲ್ಲಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆಗೆ ನಾನೂ ಆಕಾಂಕ್ಷಿ:ನಾನು ಸಚಿವನಾಗಿದ್ದಾಗ ಇಡೀ ರಾಜ್ಯದ ಉದ್ದಗಲಕ್ಕೂ ಓಡಾಡಿದೆ. ಯುವಕರು ಆಹ್ವಾನ ನೀಡಿದ್ದಕ್ಕೆ ನಾನು ಜಿಲ್ಲಾದ್ಯಂತ ಓಡಾಟ ಮಾಡ್ತೀನಿ, ಸನಾತನ ಹಿಂದೂ ಧರ್ಮದ ಆಚರಣೆಯಲ್ಲಿ ನಾನು ಭಾಗವಹಿಸುತ್ತೇನೆ. ಕಾಂಗ್ರೆಸ್ ಸರ್ಕಾರದ ಅಧಿಕಾರವಧಿಯಲ್ಲಿ ಲಿಂಗಾಯತ ಅಧಿಕಾರಿಗಳನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್​ನ ಹಿರಿಯರು ಮುಖಂಡರು, ಅವರು ಹೇಳಿದ್ದರಲ್ಲಿ ಸತ್ಯಾಂಶವಿದೆ. ಅದು ಇದ್ದರೂ ಇರಬಹುದು. ಅದನ್ನು ಸರ್ಕಾರ ಸರಿಪಡಿಸಿಕೊಳ್ಳಬೇಕು ಎಂದ ರೇಣುಕಾಚಾರ್ಯ ಸಲಹೆ ನೀಡಿದರು.

ಇದನ್ನೂಓದಿ: ಗಾಂಧಿ ಜಯಂತಿಗೂ ಮುನ್ನ ಸ್ವಚ್ಛತಾ ಅಭಿಯಾನಕ್ಕೆ ಕರೆ ನೀಡಲಿರುವ ಪ್ರಧಾನಿ ಮೋದಿ..

Last Updated : Sep 29, 2023, 4:32 PM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.