ETV Bharat / state

ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ.. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ - DC Mahantesh Bilagi statement

ಸಾರ್ವಜನಿಕರು ದೂರು ಮತ್ತು ಅಹವಾಲುಗಳನ್ನು ನೀಡುವುದು ಅವರ ಕರ್ತವ್ಯ. ಅದರಂತೆ ಚುನಾವಣೆಗಳಲ್ಲಿ ಮತದಾನ ಮಾಡಬೇಕಿರುವುದು ನಾಗರಿಕರಾದ ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸಲಹೆ ನೀಡಿದರು.

ಮತದಾನ ಮಾಡುವದು ನಮ್ಮೆಲ್ಲರ ಕರ್ತವ್ಯ: ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ
author img

By

Published : Nov 19, 2019, 12:02 AM IST

ದಾವಣಗೆರೆ: ಸಾರ್ವಜನಿಕರು ದೂರು ಮತ್ತು ಅಹವಾಲುಗಳನ್ನು ನೀಡುವುದು ಕರ್ತವ್ಯ. ಅದರಂತೆ ಚುನಾವಣೆಗಳಲ್ಲಿ ಮತದಾನ ಮಾಡಬೇಕಿರುವುದು ನಾಗರಿಕರಾದ ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವೆಂದು ದೂರು ನೀಡಲು ಬಂದಿದ್ದ ಮಹಿಳಾ ವಕೀಲರೊಬ್ಬರಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸಲಹೆ ನೀಡಿದರು.

ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ.. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ಜಿಲ್ಲಾಡಳಿತ ಭವನದಲ್ಲಿ ನಡೆದ ಜನಸ್ಪಂದನದಲ್ಲಿ ಜನರ ಅವಹಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ದೂರು ನೀಡಲು ಆಗಮಿಸಿದ್ದ ಮಹಿಳಾ ವಕೀಲರೊಬ್ಬರಿಗೆ ನೀವು ಈ ಬಾರಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾನ ಮಾಡಿದ್ದೀರಾ ಎಂದಾಗ, ಆ ಮಹಿಳೆ ಇಲ್ಲ ಎಂದು ಹೇಳಿದರು. ಇದಕ್ಕೆ ಜಿಲ್ಲಾಧಿಕಾರಿಗಳು ನಾಗರಿಕರಾಗಿ ಮತದಾನ ಮಾಡಬೇಕಿರುವುದು ನಮ್ಮ ಮುಖ್ಯ ಕರ್ತವ್ಯ, ಮತದಾನ ನಮ್ಮ ಹಕ್ಕು ಅದನ್ನು ಬಳಸಬೇಕಿರುವುದು ನಮ್ಮ ಜವಾಬ್ದಾರಿ, ಮೂಲಭೂತ ಸೌಕರ್ಯ ಬೇಕು ಎಂದು‌ ಕೇಳುತ್ತೀರಿ. ಆದರೆ, ನಿಮ್ಮ ಕರ್ತವ್ಯವಾದ ಮತದಾನ ಪ್ರಕ್ರಿಯೆಯಲ್ಲಿ ನೀವು ತೊಡಗಿರುವುದಿಲ್ಲ, ಆದ್ದರಿಂದ ತಪ್ಪದೇ ನಿಮ್ಮ ಜವಾಬ್ದಾರಿ ಚಲಾಯಿಸಿ ಎಂದು ಮಹಿಳೆಗೆ ಡಿಸಿ ಸಲಹೆ ನೀಡಿದರು.

ಸಭೆಯಲ್ಲಿ ವೃದ್ದಾಪ್ಯ ವೇತನ, ವಿಧವಾ ವೇತನ, ಖಾತೆ ವರ್ಗಾವಣೆ, ಬಸ್ ವ್ಯವಸ್ಥೆ ಕಲ್ಪಿಸುವ ಕುರಿತು, ಸಾಲ ಸೌಲಭ್ಯಗಳ ಹಾಗೂ ಅಂಗವಿಕಲರಿಗೆ ಸ್ವಉದ್ಯೋಗಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅನೇಕ ಅಹವಾಲುಗಳನ್ನು ಸ್ವೀಕರಿಸಲಾಯಿತು.

Intro:ದಾವಣಗೆರೆ; ಸಾರ್ವಜನಿಕರು ದೂರು ಮತ್ತು ಅಹವಾಲುಗಳನ್ನು ನೀಡುವುದು ಕರ್ತವ್ಯ. ಅದರಂತೆ ಚುನಾವಣೆಗಳಲ್ಲಿ ಮತದಾನ ಮಾಡಬೇಕಿರುವುದು ನಾಗರಿಕರಾದ ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವೆಂದು ದೂರು ನೀಡಲು ಬಂದಿದ್ದ ಮಹಿಳಾ ವಕೀಲರೊಬ್ಬರಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಕ್ಲಾಸ್ ತೆಗೆದುಕೊಂಡರು..Body:ಹೌದು.. ಜಿಲ್ಲಾಡಳಿತ ಭವನದಲ್ಲಿ ನಡೆದ ಜನಸ್ಪಂದನದಲ್ಲಿ ಜನರ ಅವಹಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ದೂರು ನೀಡಲು ಆಗಮಿಸಿದ್ದ ಮಹಿಳಾ ವಕೀಲರೊಬ್ಬರಿಗೆ ನೀವು ಈ ಬಾರಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾನ ಮಾಡಿದ್ದಿರಾ ಎಂದಾಗ, ಆ ಮಹಿಳೆ ಇಲ್ಲ ಎಂದು ಹೇಳಿದರು. ಇದಕ್ಕೆ ಜಿಲ್ಲಾಧಿಕಾರಿಗಳು ನಾಗರಿಕರಾಗಿ ಮತದಾನ ಮಾಡಬೇಕಿರುವುದು ನಮ್ಮ ಮುಖ್ಯ ಕರ್ತವ್ಯ, ಮತದಾನ ನಮ್ಮ ಹಕ್ಕು ಅದನ್ನು ಬಳಸಬೇಕಿರುವುದು ನಮ್ಮ ಜವಾಬ್ದಾರಿ, ಮೂಲಭೂತ ಸೌಕರ್ಯ ಬೇಕು ಎಂದು‌ ಕೇಳುತ್ತೀರಿ, ಆದರೆ ನಿಮ್ಮ‌ ಕರ್ತವ್ಯವಾದ ಮತದಾನ ಪ್ರಕ್ರಿಯೆಯಲ್ಲಿ ನೀವು ತೊಡಗಿರುವುದಿಲ್ಲ, ಆದ್ದರಿಂದ ತಪ್ಪದೇ ನಿಮ್ಮ ಜವಾಬ್ದಾರಿ ಚಲಾಯಿಸಿ ಎಂದು ಮಹಿಳೆಗೆ ಡಿಸಿ ಸಲಹೆ ನೀಡಿದರು.

ಜನಸ್ಪಂದನ ಸಭೆಯಲ್ಲಿ ದೇವರಾಜ್ ಅರಸ್ ಬಡಾವಣೆಯ ನಿವಾಸಿಯೊಬ್ಬರು ಕೋರ್ಟ್‍ನ ಹಿಂಭಾಗ ಮತ್ತು ಸುತ್ತ ಮುತ್ತ ಪ್ರದೇಶಗಳಲ್ಲಿ ಸ್ವಚ್ಚತೆ ಇಲ್ಲ, ಇಲ್ಲಿ ವಾಸಿಸುವ ಜನಸಾಮಾನ್ಯರಿಗೆ ಇದರಿಂದ ತೊಂದರೆಯಾಗುತ್ತಿದೆ. ಮತ್ತು ರಿಂಗ್ ರಸ್ತೆ ಹಾಗೂ ಕೋರ್ಟ್ ಹಿಂಭಾಗದ ರಸ್ತೆಗಳಲ್ಲಿ ಓಡಾಡಲು ಸಾರ್ವಜನಿಕರಿಗೆ ಭಯದ ವಾತವರಣವಿದೆ. ಇದರ ಬಗ್ಗೆ ಮಹಾನಗರಪಾಲಿಕೆ ಹಲವಾರು ಬಾರಿ ದೂರು ನೀಡಿದ್ದರು ಯಾವುದೇ ಪ್ರಯೋಜನವಾಗಿಲ್ಲವೆಂದು ದೂರಿದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ನಗರದ ಹಲವಾರು ಸ್ಥಳಗಳಲ್ಲಿ ಇದೇ ರೀತಿಯ ಸಮಸ್ಯೆಗಳಿದ್ದು, ಅದರ ಬಗ್ಗೆ ಗಮನ ಹರಿಸಿ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಮಹಾನಗರಪಾಲಿಕೆ ಆಯುಕ್ತರಿಗೆ ತಿಳಿಸಿದರು. ವಾಕ್ ಮತ್ತು ಶ್ರವಣ ದೋಷವುಳ್ಳ ವಿಕಲಚೇತನರು ನಮಗೆ ಸ್ವಯಂ ಉದ್ಯೋಗ ಯೋಜನೆಯಡಿ ಸಾಲ ಸೌಲಭ್ಯಗಳನ್ನು ಒದಗಿಸಿಕೊಡಿ ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ನಿಮಗೆ ಅವಶ್ಯವಿರುವ ಸಹಾಯ ಮಾಡಲು ನಾನು ಸಿದ್ಧನಿದ್ದೆ, ನಿಮ್ಮ ಅನುಕೂಲಕ್ಕಾಗಿ ಸಂಬಂಧಿಸಿದ ಎಲ್ಲ ಇಲಾಖೆಗಳ ಸಮ್ಮಖದಲ್ಲಿ ಅಭೆ ನಡೆಸಿ ಅಗತ್ಯವಾದ ಸಹಾಯ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಿದರು.

ಸಭೆಯಲ್ಲಿ ವೃದ್ದಾಪ್ಯ ವೇತನ, ವಿಧವಾ ವೇತನ, ಖಾತೆ ವರ್ಗಾವಣೆ, ಬಸ್ ವ್ಯವಸ್ಥೆ ಕಲ್ಪಿಸುವ ಕುರಿತು, ಸಾಲ ಸೌಲಭ್ಯಗಳ ಕುರಿತು ಹಾಗೂ ಅಂಗವಿಕಲರಿಗೆ ಸ್ವಉದ್ಯೋಗಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅನೇಕ ಅಹವಾಲುಗಳನ್ನು ಸ್ವೀಕರಿಸಲಾಯಿತು.
Conclusion:ಒಟ್ಟಾರೆ ಸಭೆಯಲ್ಲಿ ಸಾರ್ವಜನಿಕರಿಂದ ಅನೇಕ ಅರ್ಜಿಗಳು ಬಂದಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿಗಳು, ಸಭೆಯಲ್ಲಿದ್ದ ಅಧಿಕಾರಿಗಳನ್ನುದ್ದೇಶಿಸಿ ಎಲ್ಲಾ ಇಲಾಖೆಯವರು ನಿಮ್ಮ ಕಚೇರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಅಲ್ಲೇ ಬಗೆಹರಿಸಿದರೆ, ಜನರು ಜಿಲ್ಲಾಡಳಿತ ಕಚೇರಿಗೆ ಬರಲು ಅವಕಾಶವಿರುವುದಿಲ್ಲ. ಇಲ್ಲಿರುವ ಎಲ್ಲಾ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಿ ಎಂದು ಹೇಳಿದರು.
ಕಾನೂನುನ್ನು ಹೊರತು ಪಡಿಸಿ ಸಾರ್ವಜನಿಕರ ಕಾಳಜಿ ವಹಿಸಿ ಕೆಲಸ ಮಾಡಬೇಕು. ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಅಧಿಕಾರಿಗಳು ನಡೆದುಕೊಳ್ಳುವ ರೀತಿಯಿಂದ ನಮ್ಮ ಕಚೇರಿಯ ವರ್ಚಸ್ಸುನ್ನು ಹೆಚ್ಚಿಸುತ್ತದೆ. ಆದ್ದರಿಂದ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಪ್ರೀತಿ ಮತ್ತು ಕಾಳಜಿಯಿಂದ ವರ್ತಿಸುವ ಗುಣ ಬೆಳೆಸಿಕೊಳ್ಳಿ. ಸಾರ್ವಜನಿಕರ ಮನವಿಯನ್ನು ಆಲಿಸಿಕೊಂಡು ಅವರ ಸಮಸ್ಯೆಗೆ ಪರಿಹಾರ ಒದಗಿಸುವ ಕಾರ್ಯವಾಗಬೇಕೆ ಎಂದು ಸೂಚನೆ ನೀಡಿದರು .

ಪ್ಲೊ..

ಬೈಟ್; ಮಹಾಂತೇಶ್ ಬಿಳಗಿ. ಜಿಲ್ಲಾಧಿಕಾರಿ..
ETV Bharat Logo

Copyright © 2025 Ushodaya Enterprises Pvt. Ltd., All Rights Reserved.