ದಾವಣಗೆರೆ : ನಮ್ಮದು ರಾಷ್ಟ್ರೀಯ ಪಕ್ಷ ಬೇಧ ಭಾವ ಮಾಡುವ ಅವಶ್ಯಕತೆ ಇಲ್ಲ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದಾಗ ಏನೆಲ್ಲ ಮಾಡಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಸಿ ಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಪ್ರತಿಭಟನೆ ಕಡಿಮೆಯಾಗಿದೆ. ಮಂಗಳೂರಿನಲ್ಲಿ ನಡೆದಂತಹ ಹತ್ಯೆಗಳಿಗೆ ಸಂಬಂಧಿಸಿದಂತೆ ನಮ್ಮ ಪೊಲೀಸ್ ಇಲಾಖೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಹೇಳಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಗೆ ಭದ್ರತೆ ವಿಚಾರವಾಗಿ ಮಾತನಾಡಿದ ಸಿಎಂ, ಸಚಿವರ ಮನೆಗೆ ಭದ್ರತೆ ಒದಗಿಸಿಲ್ಲ, ಗೃಹ ಸಚಿವರ ಭದ್ರತೆಯ ವ್ಯವಸ್ಥೆಯನ್ನು ಬದಲಾಯಿಸಲಾಗಿದೆ. ಎಬಿವಿಪಿ ಪ್ರತಿಭಟನೆಯ ಸಂದರ್ಭದಲ್ಲಿ ಯಾರು ಅಧಿಕಾರಿಗಳು ಅಲ್ಲಿ ಇರ್ಲಿಲ್ವೋ ಅವರಿಗೆ ತಾಕೀತು ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ರಾಜ್ಯದಲ್ಲಿ ಕಂಡು ಬಂದಿರುವ ಮಂಕಿಫಾಕ್ಸ್ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ನಾಳೆ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಸುಧಾಕರ್ ಹಾಗು ಅಧಿಕಾರಿಗಳೊಂದಿಗೆ ಮಹತ್ವದ ಸಭೆಯನ್ನು ನಡೆಸಲಿದ್ದೇವೆ. ಮಹಾಮಾರಿ ಮಂಕಿಫಾಕ್ಸ್ ಬಗ್ಗೆ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ಅವರು ಹೇಳಿದರು.
ಓದಿ : ಮಳೆಹಾನಿ, ಮಂಕಿಪಾಕ್ಸ್ ಕುರಿತು ನಾಳೆ ಅಧಿಕಾರಿಗಳ ಸಭೆ: ಸಿಎಂ ಬೊಮ್ಮಾಯಿ