ದಾವಣಗೆರೆ: ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರು ಬ್ಲ್ಯೂ ಫಿಲಂ ಹೀರೋ ಎಂಬ ಮಾಜಿ ಸಚಿವ ಸಾ. ರಾ. ಮಹೇಶ್ರ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಆ ಬ್ಲ್ಯೂ ಫಾರಂ, ಮಾತೃ ಫಾರಂ ತೆಗೆದುಕೊಂಡು ನಾವೇನು ಮಾಡೋಣ ಎಂದು ಹೇಳಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, 15 ಕ್ಷೇತ್ರಗಳ ಉಪಚುನಾವಣೆ ಕುರಿತಂತೆ ಈಗಾಗಲೇ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಅನರ್ಹರು ಸುಪ್ರೀಂಕೋರ್ಟ್ಗೆ ಅರ್ಜಿ ಹಾಕಿದ್ದಾರೆ. ಮುಂದೇನಾಗುತ್ತದೆ ಎಂದು ಕಾದು ನೋಡೋಣ ಎಂದರು. ಇನ್ನು, ಎಲ್ಲಾ ಪಕ್ಷದವರೂ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. ಚುನಾವಣಾ ಆಯೋಗ ಹೇಳಿದಂತೆ ಚುನಾವಣೆ ನಡೆಯುತ್ತದೆಯೇ ವಿನಾ ಬಿಜೆಪಿಯವರು ಹೇಳಿದ ಹಾಗೆ ನಡೆಯೋದಿಲ್ಲ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.