ದಾವಣಗೆರೆ: ಪ್ರಯಾಣಿಕರ ಆಟೋಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿ, ಇತರ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಬಳಿ ಇರುವ ಹರಿಹರ - ಶಿವಮೊಗ್ಗ ರಾಜ್ಯ ಹೆದ್ದಾರಿ ಬಳಿ ಸಂಭವಿಸಿದೆ.
ಮೃತ ಮಹಿಳೆಯನ್ನು ಚಂದ್ರಮ್ಮ (52) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಹರಿಹರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋರಿಕ್ಷಾ ಹರಿಹರದಿಂದ ಭಾನುವಳ್ಳಿ ಗ್ರಾಮಕ್ಕೆ ತೆರಳುತ್ತಿದ್ದು, ಭಾನುವಳ್ಳಿ ಕಡೆಯಿಂದ ಬಂದ ಟ್ರ್ಯಾಕ್ಟರ್ ಢಿಕ್ಕಿ ಹೊಡೆದಿದೆ. ಆಟೋದಲ್ಲಿ 6ಕ್ಕೂ ಹೆಚ್ಚು ವಿದ್ಯಾರ್ಥಿಗಳು, ವಯಸ್ಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಉಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ಹೊತ್ತ ಮೊದಲ ವಿಮಾನ ಮುಂಬೈಗೆ ಆಗಮನ
ಅಪಘಾತದಲ್ಲಿ ಗಾಯಗೊಂಡವರನ್ನು ರಸ್ತೆ ಬದಿಯ ಡಾಬಾದವರು ರಕ್ಷಣೆ ಮಾಡಿದ್ದಾರೆ. ಮಾಹಿತಿ ತಿಳಿದ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.