ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿ ನಡೆದಿದೆ.
60 ವರ್ಷದ ಶಿವಮ್ಮ ಗಾಯಗೊಂಡ ಮಹಿಳೆಯಾಗಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟಕ್ಕೆ ಭಾಗಶಃ ಮನೆಗೆ ಹಾನಿಯಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.