ETV Bharat / state

ಕೋವಿಡ್ ನಿಯಂತ್ರಣ- ಕೇಂದ್ರದ ಕ್ರಮಗಳನ್ನ ವಿಶ್ವವೇ ಮೆಚ್ಚಿಕೊಂಡಿದೆ: ಸಂಸದ ಜಿ.ಎಂ. ಸಿದ್ದೇಶ್ವರ

ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಿಳಿಸುವ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಶುಕ್ರವಾರ ಕರಪತ್ರ ಹಂಚುವ ಮೂಲಕ ಸಂಸದ ಜಿ.ಎಂ. ಸಿದ್ದೇಶ್ವರ​ ಚಾಲನೆ ನೀಡಿದರು.

Harihara
ಮನೆ ಮನೆ ಸಂಪರ್ಕ ಅಭಿಯಾನ
author img

By

Published : Jun 13, 2020, 10:48 AM IST

ಹರಿಹರ: ದೇಶದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಇಡಿ ವಿಶ್ವವೇ ಮೆಚ್ಚುಗೆ ವ್ಯಕ್ತ ಪಡಿಸುತ್ತಿದೆ ಎಂದು ಸಂಸದ ಜಿ.ಎಂ ಸಿದ್ದೇಶ್ವರ ಹೇಳಿದರು.

ನಗರದ ಜೆ.ಸಿ ಬಡಾವಣೆಯಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಜನಸಮಾನ್ಯರಿಗೆ ತಿಳಿಸುವ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಶುಕ್ರವಾರ ಕರಪತ್ರ ಹಂಚುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕೋವಿಡ್-19 ನಿಂದಾಗಿ ದೇಶ ಆರ್ಥಿಕ ಸಂಕಷ್ಟದಲ್ಲಿದ್ದರೂ 20 ಲಕ್ಷ ಕೋಟಿ ರೂ ವಿಶೇಷ ಪ್ಯಾಕೇಜ್ ನೀಡುವ ಮೂಲಕ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ವಿಶ್ವಕ್ಕೆ ಮಾದರಿಯಾಗಿದೆ ಎಂದರು.

ಲಾಕ್‌ಡೌನ್ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡವರಿಗೆ, ನಿರ್ಗತಿಕರಿಗೆ ಹಾಗೂ ವಲಸೆ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಹಣ ಹಾಕುವ ಮೂಲಕ ಜನಸಮಾನ್ಯರ ನೆರವಿಗೆ ಬಂದಿದ್ದು, ರೈತರಿಗೆ ಹಾಗೂ ಕೈಗಾರಿಕೆಗಳಿಗೆ ವಿಶೇಷ ಪ್ಯಾಕೇಜ್ ನೀಡಲಾಯಿತು ಎಂದರು.

ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಶುಕ್ರವಾರ ಕರಪತ್ರ ಹಂಚುವ ಮೂಲಕ ಚಾಲನೆ ನೀಡಿದ ಸಂಸದ ಜಿ.ಎಂ. ಸಿದ್ದೇಶ್ವರ.

ಇನ್ನು ಜಗತ್ತನ್ನೇ ಆವರಿಸಿದ ಕೊರೊನಾ ವೈರಸ್‌ಗೆ ಚುಚ್ಚುಮದ್ದು ಕಂಡು ಹಿಡಿಯುವವರೆಗೂ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡು ಸುರಕ್ಷಿತವಾದ ಜೀವನವನ್ನು ನಡೆಸುವುದು ಅನಿವಾರ್ಯವಾಗಿದೆ ಎಂದರು. ಪಕ್ಷದ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಬೂತ್ ಮಟ್ಟದಲ್ಲಿ ತಲುಪಿಸಲು, ಮನೆ ಮನೆಗೆ ಹೋಗುವ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳುವುದು ಹಾಗೂ ಸಾಮಾಜಿಕ ಅಂತರದ ಬಗ್ಗೆ ಗಮನ ಹರಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಪಿ. ಹರೀಶ್, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಎಂ.ವೀರೇಶ್, ಜಿ.ಪಂ ಸದಸ್ಯ ವಾಗೀಶ್ ಸ್ವಾಮಿ, ಯಶವಂತ್ ರಾವ್ ಜಾದವ್, ದೂಡಾ ಅಧ್ಯಕ್ಷ ಶಿವಕುಮಾರ್, ಸದಸ್ಯ ರಾಜು ರೋಖಡೆ, ನಗರ ಘಟಕ ಅಧ್ಯಕ್ಷ ಅಜೀತ್ ಸಾವಂತ್ ಹಾಗೂ ಇತರರು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.