ದಾವಣಗೆರೆ: ಅನಗತ್ಯವಾಗಿ ರಸ್ತೆಯಲ್ಲಿ ಓಡಾಡುತ್ತಿದ್ದ ಬೈಕ್ ಸವಾರರಿಗೆ ಜಿಲ್ಲೆಯ ಹರಿಹರದ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.
ಈ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆಸಿರುವ ಯುವಕರು ಮಾತಿನ ಚಕಮಕಿ ನಡೆಸಿದ್ದಾರೆ. ಕೊನೆಗೆ ಪೊಲೀಸರು ಯುವಕರಿಗೆ ಲಾಠಿ ರುಚಿ ತೋರಿಸಿ ಜೈಲಿಗೆ ಕಳುಹಿಸಿದ್ದಾರೆ.
ಕೆಲಸವಿಲ್ಲದೇ ಅನವಶ್ಯಕವಾಗಿ ಯಾರೂ ರಸ್ತೆಯಲ್ಲಿ ಓಡಾಡಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಆದೇಶಿಸಿದ್ದರು. ಆದರೂ ಯುವಕರು ಲಾಕ್ಡೌನ್ ಉಲ್ಲಂಘಿಸಿದ್ದು, ಎಷ್ಟೇ ಮನವಿ ಮಾಡಿದರೂ ಲೆಕ್ಕಿಸದೇ ಓಡಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಹರಿಹರದಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದಾರೆ.