ದಾವಣಗೆರೆ: ತಂದೆಯ ಸಾವಿನಿಂದ ಮಾನಸಿಕ ಖಿನ್ನತೆಗೊಳಗಾದ ಯುವಕನೊಬ್ಬ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಸಮೀಪದ ಹಿರೇಕೋಗಲೂರು ಗ್ರಾಮದಲ್ಲಿ ನಡೆದಿದೆ.
ವೆಂಕಟೇಶ್ (25) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕೆಲವು ದಿನಗಳ ಹಿಂದೆ ಯುವಕನ ತಂದೆ ರೇವಪ್ಪ ಅಕಾಲಿಕವಾಗಿ ನಿಧನರಾಗಿದ್ದರು. ತಂದೆ ಸಾವನಪ್ಪಿರುವ ಹಿನ್ನೆಲೆಯಲ್ಲಿ ಯುವಕ ವೆಂಕಟೇಶ್ ಮಾನಸಿಕ ಖಿನ್ನತೆಗೆ ಒಳಗಾಗಿ ನಿತ್ಯವೂ ಜುಗುಪ್ಸೆಯಿಂದ ಇರುತ್ತಿದ್ದ ಎಂದು ತಿಳಿದು ಬಂದಿದೆ.
ಮಾನಸಿಕವಾಗಿ ಖಿನ್ನತೆಗೊಳದ ವೆಂಕಟೇಶ್ ,ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾಯಿ ಮನೆಗೆ ಆಗಮಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಉಕ್ರೇನ್ನಲ್ಲಿರುವ ರಾಜ್ಯದವರನ್ನು ಸುರಕ್ಷಿತವಾಗಿ ಕರೆತರಲು ಎಲ್ಲ ರೀತಿಯ ಕ್ರಮ : ಸಿಎಂ ಬೊಮ್ಮಾಯಿ