ಹುಬ್ಬಳ್ಳಿ : ಕೊರೊನಾ ವಿರುದ್ದ ಹೋರಾಟಕ್ಕೆ ಮೂರುಸಾವಿರ ಮಠದಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಹಾಯಹಸ್ತ ನೀಡಿದೆ.
ಮೂರುಸಾವಿರ ಮಠದ ಜಗದ್ಗುರು ಗುರುಸಿದ್ದ ರಾಜಯೋಗೀಂದ್ರ ಶ್ರೀಗಳು 10 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಕೊರೊನಾ ವಿರುದ್ದದ ಹೋರಾಟದಲ್ಲಿ ಸರ್ಕಾರಕ್ಕೆ ಸಹಾಯವಾಗುವ ನಿಟ್ಟಿನಲ್ಲಿ ಸಚಿವ ಜಗದೀಶ ಶೆಟ್ಟರ್ ಮೂಲಕ 10 ಲಕ್ಷದ ಚೆಕ್ ಸರ್ಕಾರಕ್ಕೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಪ್ರದೀಪ್ ಶೆಟ್ಟರ್, ಶಂಕ್ರಣ್ಣ ಮುನವಳ್ಳಿ ಸೇರಿದಂತೆ ಮಠದ ಉನ್ನತ ಸಮಿತಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.