ಹುಬ್ಬಳ್ಳಿ: ಮಹಾಮಾರಿ ಕೊರೊನಾ ವಿರುದ್ಧ ನಿರಂತರ ಹೋರಾಟ ನಡೆಸುತ್ತಿರುವ ವೈದ್ಯರ ಆರೋಗ್ಯ ರಕ್ಷಣೆ ನಿಟ್ಟಿನಲ್ಲಿ ಹುಬ್ಬಳ್ಳಿಯ ಲಯನ್ಸ್ ಕ್ಲಬ್ ವತಿಯಿಂದ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ(ಕಿಮ್ಸ್)ಗೆ 100 ಪಿಪಿಇ ಕಿಟ್ಗಳನ್ನು ವಿತರಣೆ ಮಾಡಲಾಯಿತು.
ಕೊರೊನಾ ವಿರುದ್ಧದ ಹೋರಾಟದಲ್ಲಿ ವೈದ್ಯಕೀಯ ಇಲಾಖೆಯ ಪಾತ್ರ ಪ್ರಮುಖವಾದದ್ದು. ನಿರಂತರವಾಗಿ ತಮ್ಮ ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿರುವ ವೈದ್ಯಕೀಯ ಇಲಾಖೆ ಸಿಬ್ಬಂದಿಯ ಆರೋಗ್ಯ ರಕ್ಷಣೆ ದೃಷ್ಟಿಯಿಂದ 100 ಪಿಪಿಇ ಕಿಟ್ಗಳನ್ನು ವಿತರಿಸಲಾಗಿದೆ.
ಈ ವೇಳೆ ಮಾತನಾಡಿದ ಲಯನ್ಸ್ ಕ್ಲಬ್ ಅಧ್ಯಕ್ಷ ಉದಯ ಬಾಡಕರ್, ಜಗತ್ತು ಕಂಡು ಕೇಳರಿಯದ ವೈರಸ್ನಿಂದ ನಲುಗಿ ಹೋಗುತ್ತಿದೆ. ಅಲ್ಲದೆ ಕೋವಿಡ್ಗೆ ಔಷಧಿ ಕೂಡಾ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಜನರ ಪ್ರಾಣ ಉಳಿಸಲು ಮುಂಚೂಣಿಯಲ್ಲಿ ನಿಂತು ನಿರಂತರ ಹೋರಾಟ ಮಾಡುತ್ತಿರುವ ವೈದ್ಯಕೀಯ ಸಿಬ್ಬಂದಿಯ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಪಿಪಿಇ ಕಿಟ್ ವಿತರಣೆ ಮಾಡಲಾಗುತ್ತಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ವೈದ್ಯರ ಸೇವೆ ಶ್ಲಾಘನೀಯ ಎಂದರು.