ಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪಾರಿ ಹಂತಕರಿಗೆ ಮಾರ್ಚ್ 20 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ವಿಚಾರಣೆ ನಡೆಸಿ ಸಿಬಿಐ ಅಧಿಕಾರಿಗಳು ಹಂತಕರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರು ಜನ ಸುಪಾರಿ ಹಂತಕರಾದ ದಿನೇಶ, ಅಶ್ವಥ್, ಶಾ ನವಾಜ್, ಸುನೀಲ್ ಕುಮಾರ್, ನಜೀರ್ ಅಹ್ಮದ್ ಹಾಗು ನೂತನ್ ಆರೋಪಿಗಳಾಗಿದ್ದಾರೆ.
ಇವರೆಲ್ಲಾ ಬೆಂಗಳೂರು ಹಾಗೂ ತಮಿಳುನಾಡು ಮೂಲದವಾಗಿದ್ದು, ಪೊಲೀಸರು ಆರೋಪಿಗಳನ್ನು ಜಿಲ್ಲಾ ಪ್ರಧಾನ ಜೆಎಂಎಫ್ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.