ಹುಬ್ಬಳ್ಳಿ : ಅಣ್ಣಿಗೇರಿ ತಾಲೂಕಿನ ಮಣಕವಾಡ ಗ್ರಾಮದ ಹತ್ತಿರ ಜಮೀನಿನಲ್ಲಿ ನಿರ್ಮಿಸಿದ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ಬಾಲಕನೋರ್ವ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮನೋಜ ಬಸವರಾಜ ಕಮ್ಮಾರ (14) ಎಂಬಾತ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಅಣ್ಣಿಗೇರಿ ಪಿಎಸ್ಐ ಲಾಲಸಾಬ ಜೂಲಕಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.