ETV Bharat / state

ಮಹದಾಯಿ ಸಮಸ್ಯೆ ಪರಿಹಾರಕ್ಕೆ ಪಕ್ಷಾತೀತ ಹೋರಾಟ: ರೈತರಿಗೆ ಜನಪ್ರತಿನಿಧಿಗಳ ಅಭಯ - ಮಹದಾಯಿ ಸಮಸ್ಯೆ ಬಗ್ಗೆ ಜನಪ್ರತಿನಿಧಿಗಳ ಸಭೆ

ಹುಬ್ಬಳ್ಳಿ: ಮಹದಾಯಿ ನದಿ ನೀರು ಹಂಚಿಕೆ ಯೋಜನೆ ವಿಚಾರವಾಗಿ ಸರ್ವಪಕ್ಷದ ಜನಪ್ರತಿನಿಧಿಗಳು ಒಟ್ಟಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

meeting about Mahadayi proiject problem, ಮಹದಾಯಿ ಸಮಸ್ಯೆ ಬಗ್ಗೆ ಜನಪ್ರತಿನಿಧಿಗಳ ಸಭೆ
ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಜನಪ್ರತಿನಿಧಿಗಳ ಸಭೆ
author img

By

Published : Jan 5, 2020, 5:45 PM IST

ಹುಬ್ಬಳ್ಳಿ: ಮಹದಾಯಿ ನದಿ ನೀರು ಹಂಚಿಕೆ ಯೋಜನೆ ವಿಚಾರವಾಗಿ ಸರ್ವಪಕ್ಷದ ಜನಪ್ರತಿನಿಧಿಗಳು ಒಟ್ಟಾಗಿ ಸಮಸ್ಯೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗಿದೆ.

ಮಹದಾಯಿ ಸಮಸ್ಯೆ ಪರಿಹಾರಕ್ಕೆ ಪಕ್ಷಾತೀತ ಹೋರಾಟ: ಜನಪ್ರತಿನಿಧಿಗಳ ಭರವಸೆ

ನಗರದ ಸರ್ಕ್ಯೂಟ್ ಹೌಸ್​​ನಲ್ಲಿ ನಡೆದ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಜನಪ್ರತಿನಿಧಿಗಳ ಸಭೆ ಬಳಿಕ ಮಹದಾಯಿ ನದಿ ನೀರು ಹಂಚಿಕೆ ಯೋಜನೆ ವಿಚಾರವಾಗಿ ಮುಂದಿನ 15 ದಿನಗಳಲ್ಲಿ ಅಂತಿಮ ನಿರ್ಧಾರ ಪ್ರಕಟಿಸಬೇಕೆಂದು ಮಹದಾಯಿ ಅಚ್ಚುಕಟ್ಟಿನ ರೈತರು ಜನಪ್ರತಿನಿಧಿಗಳಿಗೆ ಗಡುವು ನೀಡಿದರು. ಈ ವೇಳೆ ರೈತರೊಂದಿಗೆ ಮಾತುಕತೆ ನಡೆಸಿದ ವಿಧಾನ ಪರಿಷತ್​ ಸದಸ್ಯ ಬಸವರಾಜ್​ ಹೊರಟ್ಟಿ, ಸಚಿವ ಜಗದೀಶ್​ ಶೆಟ್ಟರ್​​ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರು ಮಹದಾಯಿ ಯೋಜನೆ ಜಾರಿ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ರು.

ಸರ್ವಪಕ್ಷದ ಜನಪ್ರತಿನಿಧಿಗಳು ಒಟ್ಟಾಗಿ ಮಹದಾಯಿ ವಿಚಾರಕ್ಕೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗಿದೆ. ಕೂಡಲೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಆದಷ್ಟು ಬೇಗ ಮಹದಾಯಿ ಸಮಸ್ಯೆ ಬಗೆಹರಿಸಲಾಗುವುದು ಎಂದು ರೈತರಿಗೆ ತಿಳಿಸಿದರು.

ರೈತ ಮುಖಂಡರ ಪ್ರತಿಭಟನೆ:

ಸಭೆ ನಡೆಯುತ್ತಿದ್ದ ವೇಳೆ ಸರ್ಕ್ಯೂಟ್ ಹೌಸ್ ಆವರಣದಲ್ಲಿ ಪ್ರತಿಭಟನೆ ನಡೆಸಿದ ರೈತರು, ಜನಪ್ರತಿನಿಧಿಗಳ ಸಭೆಯಲ್ಲಿ ತಮಗೆ ಅವಕಾಶ ನೀಡದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ನೆರೆ ಪರಿಹಾರ ಹಾಗೂ ಮಹದಾಯಿ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಜೊತೆ ಕಣ್ಣಾಮುಚ್ಚಾಲೆ ಆಟ ಆಡುತ್ತಿವೆ. ರೈತನ ಕಷ್ಟ ಆಲಿಸುವಲ್ಲಿ ವಿಫಲವಾಗಿವೆ ಎಂದು ಪ್ರತಿಭಟನಾನಿರತ ರೈತರು ಘೋಷಣೆ ಕೂಗಿದರು.

Intro:HubliBody:ಸ್ಲಗ್:- ಮಹದಾಯಿ ಸಮಸ್ಯೆ ಯನ್ನು ಹದಿನೈದು ದಿನಗಳಲ್ಲಿ ಬಗೆಹರಿಸುವಂತೆ ಒತ್ತಾಯಿಸಿದ ರೈತರು...

ಹುಬ್ಬಳ್ಳಿ:-ಮಹದಾಯಿ ಕಳಸಾ ಬಂಡೂರಿ ಯೋಜನೆ ವಿಚಾರವಾಗಿ ಮುಂದಿನ 15 ದಿನಗಳಲ್ಲಿ ಅಂತಿಮ ನಿರ್ಧಾರ ಪ್ರಕಟಿಸಬೇಕೆಂದು ಮಹದಾಯಿ ಅಚ್ಚುಕಟ್ಟಿನ ರೈತರು ಜನಪ್ರತಿನಿದಿಗಳಿಗೆ ಗಡವು ನೀಡಿದ್ದಾರೆ.ನಗರದ ಸರ್ಕ್ಯೂಟ್ ಹೌಸನಲ್ಲಿ ನಡೆದ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಜನಪ್ರತಿನಿಧಿಗಳ ಸಭೆಯ ಬಳಿಕ ರೈತರನ್ನು ಭೇಟಿಯಾದ ಜನಪ್ರತಿನಿಧಿಗಳು, ಮಹದಾಯಿ ವಿಚಾರವಾಗಿ ಸಭೆಯಲ್ಲಿ ಏನೆಲ್ಲಾ ಚರ್ಚೆಗಳನ್ನು ಮಾಡಲಾಯಿತು. ಅಂತಿಮವಾಗಿ ಸರ್ವಪಕ್ಷದ ಜನಪ್ರತಿನಿಧಿಗಳು ಒಟ್ಟಾಗಿ ಸೇರಿ ಮಹದಾಯಿ ವಿಚಾರಕ್ಕೆ ಪರಿಹಾರ ಒದಗಿಸುವಂತೆ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಕೂಡಲೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಆದಷ್ಟು ಬೇಗ ಮಹದಾಯಿ ವಿಚಾರವನ್ನು ಬಗೆಹರಿಸಲಾಗುವುದು ಎಂದು ತಿಳಿಸಿದರು. ನಂತರ ರೈತರು ಕೂಡಲೇ ಮಹದಾಯಿ ವಿಚಾರವನ್ನು ಎಲ್ಲ ಪಕ್ಷದವರು ಗಂಭೀರವಾಗಿ ಪರಿಗಣಿಸಬೇಕು. ಪಕ್ಷಾತೀತವಾಗಿ ಮಹದಾಯಿ ವಿಚಾರವಾಗಿ ಕೆಲಸ ಮಾಡಿ ಪರಿಹಾರ ಒದಗಿಸಬೇಕೆಂದು ರೈತರು ಆಗ್ರಹಿಸಿದರು....!

___________________________Conclusion:Yallappa kundagol
ETV Bharat Logo

Copyright © 2025 Ushodaya Enterprises Pvt. Ltd., All Rights Reserved.