ಹುಬ್ಬಳ್ಳಿ: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ #PMGSY-3 ಪ್ರಾರಂಭವಾಗಿದ್ದು, ಇದರಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ 200 ಕಿ.ಮೀ. ರಸ್ತೆ ಅಭಿವೃದ್ಧಿ, 7 ಬ್ರಿಡ್ಜ್ ನಿರ್ಮಾಣ ಸೇರಿ 155.90 ಕೋಟಿ ಮಂಜೂರಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.
- 634.68 ಲಕ್ಷ ರೂಪಾಯಿ ವೆಚ್ಚದಲ್ಲಿ ಅಣ್ಣಿಗೇರಿಯಿಂದ ಭದ್ರಾಪುರ ರಸ್ತೆ ಅಭಿವೃದ್ಧಿ ಕಾಮಗಾರಿ.
- 699.84 ಲಕ್ಷ ರೂಪಾಯಿ ವೆಚ್ಚದಲ್ಲಿ ಸುಳ್ಳದಿಂದ ಕುಸುಗಲ್ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ .
- 683.68 ಲಕ್ಷ ರೂಪಾಯಿ ವೆಚ್ಚದಲ್ಲಿ ಬ್ಯಾಹಟ್ಟಿಯಿಂದ ತಾಲೂಕು ಗಡಿಯವರೆಗೆ ವಯಾ ಸುಳ್ಳ ರಸ್ತೆ ಅಭಿವೃದ್ಧಿ ಕಾಮಗಾರಿ.
- 521.62 ಲಕ್ಷ ರೂಪಾಯಿ ವೆಚ್ಚದಲ್ಲಿ ಶಲವಡಿಯಿಂದ ರಾಷ್ಟ್ರೀಯ ಹೆದ್ದಾರಿವರೆಗೆ ವಯಾ ಬೋಗಾನೂರ ಕಡ್ಡಹಳ್ಳಿ, ಅಮರಗೋಳವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ.
- 1539.30 ಲಕ್ಷ ರೂಪಾಯಿ ವೆಚ್ಚದಲ್ಲಿ ಅಣ್ಣಿಗೇರಿಯಿಂದ ನಾಗರಹಳ್ಳಿ ವಯಾ ಹಳ್ಳಿಕೇರಿ ಬಸಾಪುರ ರಸ್ತೆ ಅಭಿವೃದ್ಧಿ ಕಾಮಗಾರಿ.
- 590.92 ಲಕ್ಷ ರೂಪಾಯಿ ವೆಚ್ಚದಲ್ಲಿ ಮೊರಬದಿಂದ ತಾಲೂಕು ಗಡಿವರೆಗಿನ ವಯಾ ಶಿರೂರ ಆಯಟ್ಟಿ ರಸ್ತೆ ಅಭಿವೃದ್ಧಿ ಕಾಮಗಾರಿ.
ನಮ್ಮ ಹಳ್ಳಿಗಳ ರಸ್ತೆ ಅಭಿವೃದ್ಧಿಪಡಿಸುವ ಮುಖಾಂತರ ಗ್ರಾಮೀಣ ರಸ್ತೆ ಸಂಪರ್ಕ ಮಾಡಿ ಗ್ರಾಮೀಣ ಕ್ಷೇತ್ರದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿ ಹೆಚ್ಚಿಸಲಾಗುವುದು. ಧಾರವಾಡ ಲೋಕಸಭಾ ಕ್ಷೇತ್ರದ ಈ ಕಾಮಗಾರಿಗಳನ್ನು ಪ್ರಥಮ ಆದ್ಯತೆಯಲ್ಲಿ ಮಂಜೂರು ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರಸಿಂಗ್ ತೋಮರ್ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಅಭಿನಂದಿಸುತ್ತೇನೆ ಎಂದು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.