ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, ಒಟ್ಟು 198 ಸಿಬ್ಬಂದಿಯನ್ನ ವರ್ಗಾವಣೆ ಮಾಡಲಾಗಿದೆ. ಕಮಿಷನರೇಟ್ ವ್ಯಾಪ್ತಿಯ ಠಾಣೆಯಲ್ಲಿ 6 ವರ್ಷಕ್ಕಿಂತ ಮೇಲ್ಪಟ್ಟು ಠಿಕಾಣಿ ಹೂಡಿದ್ದ 198 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬೇರೆಡೆ ವರ್ಗಾಯಿಸಲಾಗಿದೆ.
ನವನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಪೊಲೀಸ್ ಆಯುಕ್ತ ಲಾಭೂರಾಮ ನೇತೃತ್ವದಲ್ಲಿ ವೈಯಕ್ತಿಕ ಕೌನ್ಸೆಲಿಂಗ್ ನಡೆಸಿದ್ದು, 11 ಎಎಸ್‌ಐ, 53 ಹೆಡ್ಕಾನ್ಸ್ಟೇಬಲ್ ಹಾಗೂ 128 ಕಾನ್ಸ್ಟೇಬಲ್ಗಳನ್ನು ಪ್ರತ್ಯೇಕವಾಗಿ ಕೌನ್ಸೆಲಿಂಗ್ ನಡೆಸಿ ವರ್ಗಾವಣೆ ಮಾಡಲಾಗಿದೆ. ಇವರಲ್ಲಿ ಬಹುತೇಕ ಸಿಬ್ಬಂದಿ ಹುಬ್ಬಳ್ಳಿಯಿಂದ ಧಾರವಾಡ ವ್ಯಾಪ್ತಿಗೆ ಹಾಗೂ ಧಾರವಾಡದಿಂದ ಹುಬ್ಬಳ್ಳಿ ವ್ಯಾಪ್ತಿಗೆ ವರ್ಗಾವಣೆಯಾಗಿದ್ದಾರೆ. ಇದರಲ್ಲಿ ಸಂಚಾರಿ ಪೊಲೀಸ್ ಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಹ ಸೇರಿದ್ದಾರೆ.
ಓದಿ: ದುಬಾರಿ ಬೆಲೆ ಬೈಕ್ ಕೊಡಿಸದ ತಂದೆ.. ಬಾವಿಗೆ ಹಾರಿ ಪ್ರಾಣ ಬಿಟ್ಟ ಮಗ?