ಹಾವೇರಿ : ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರು ಗ್ರಾಮದ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಮೃತರನ್ನು ವೀರಣ್ಣ ಬುಡಪನಹಳ್ಳಿ (45) ಮತ್ತು ಬಸಪ್ಪ ಗೋಣೆಪ್ಪನವರ (47) ಎಂದು ಗುರುತಿಸಲಾಗಿದೆ. ಮೃತರಿಬ್ಬರು ತಮ್ಮ ದ್ವಿಚಕ್ರ ವಾಹನ (ಸ್ಕೂಟಿ)ದಲ್ಲಿ ಹಾವೇರಿ ಕಡೆಗೆ ಹೊರಟಿದ್ರು.
ಆಗ ರಾಣೆಬೆನ್ನೂರು ಕಡೆಗೆ ವೇಗವಾಗಿ ಬಂದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಇದನ್ನೂ ಓದಿ: ಭದ್ರಾವತಿಯಲ್ಲಿ ಘರ್ ವಾಪಸಿ.. ನಾಲ್ಕು ದಶಕದ ಬಳಿಕ ಹಿಂದೂ ಧರ್ಮಕ್ಕೆ ಮರಳಿದ ಕುಟುಂಬ)