ETV Bharat / state

ಹಾಡಹಗಲೇ ಮನೆಗೆ ಕನ್ನ:10 ಲಕ್ಷ ಮೌಲ್ಯದ ಬಂಗಾರದ ಒಡವೆ ಕಳ್ಳತನ - hubli news

ಹುಬ್ಬಳ್ಳಿ ನಗರದ ಬಡಾವಣೆಯೊಂದರಲ್ಲಿ ಹಾಡಹಾಗಲೇ ಮನೆಯೊಂದಕ್ಕೆ ಕನ್ನ ಹಾಕಿ ಖದೀಮರು 200 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

200 gram gold stolen in hubli
200 ಗ್ರಾಂ ಬಂಗಾರದ ಆಭರಣ ಕಳ್ಳತನ
author img

By

Published : Oct 26, 2021, 4:53 PM IST

ಹುಬ್ಬಳ್ಳಿ: ನಗರದ ಗೋಕುಲ್ ರಸ್ತೆಯ ಅಶೋಕವನ ಬಡಾವಣೆಯಲ್ಲಿ ಹಾಡುಹಗಲೇ ಕಳ್ಳರು ಮನೆ ಬೀಗ ಮುರಿದು ಸುಮಾರು 10 ಲಕ್ಷ ರೂ ಮೌಲ್ಯದ 200 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ಕಳವು ಮಾಡಿದ್ದಾರೆ.

ಆಟೋಮೋಬೈಲ್ ಅಂಗಡಿ ಹೊಂದಿರುವ ರಾಹುಲ್ ರಾಮಕೃಷ್ಣ ಟಿಕಾರೆ(36) ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಬೆಳಗ್ಗೆ 10ರಿಂದ ಮಧ್ಯಾಹ್ನ 12 ಗಂಟೆಯ ಒಳಗೆ ಕಳ್ಳರು ಮನೆಯ ಒಳಕ್ಕೆ ನುಗ್ಗಿ ಕಪಾಟಿನಲ್ಲಿದ್ದ ಸುಮಾರು 10 ಲಕ್ಷ ಮೌಲ್ಯದ ಒಡವೆ ಹಾಗೂ 15ರಿಂದ 20 ಸಾವಿರ ನಗದನ್ನು ದೋಚಿ ಪರಾರಿಯಾಗಿದ್ದಾರೆ.

ರಾಹುಲ್ ಬೆಳಗ್ಗೆ 10 ಗಂಟೆ ಸುಮಾರಿಗೆ ಅಂಗಡಿಗೆ ತೆರಳಿದ್ದಾರೆ. ಇನ್ನು ಇವರ ಪತ್ನಿ ವಿಮಾನ ನಿಲ್ದಾಣದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಕೆಲಸಕ್ಕೆ ಹೋಗಿದ್ದಾರೆ. ಇವರ ತಾಯಿ ಸಹ ಬೇರೆ ಊರಿಗೆ ಹೋಗಿದ್ದಾರೆ. ಈ ಹಿನ್ನೆಲೆ ಮನೆಗೆ ಬೀಗ ಹಾಕಿದ್ದು, ಇದನ್ನು ಗಮನಿಸಿಕೊಂಡು ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ.

ಇನ್ನು ಗೋಕುಲ್ ರಸ್ತೆ ಪೊಲೀಸ್ ಠಾಣೆಗೆ ಮಾಹಿತಿ ಸಿಕ್ಕ ತಕ್ಷಣ ಇನ್ಸ್​​ಪೆಕ್ಟರ್ ಜೆ.ಎಂ.ಕಾಲಿಮಿರ್ಚಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಬೆರಳಚ್ಚು ತಜ್ಞರು ಪರಿಶೀಲಿಸಿದ್ದಾರೆ. ಸಿಸಿಟಿವಿಯಲ್ಲಿ ಕಳ್ಳರ ದೃಶ್ಯಗಳು ಸೆರೆಯಾಗಿದ್ದು, ಇವುಗಳ ಅಧಾರದ ಮೇಲೆ ಪೊಲೀಸರು ಕಾರ್ಯ ಪ್ರವೃತ್ತರಾಗಿದ್ದಾರೆ‌.

ಇದನ್ನೂ ಓದಿ:ಮೈಸೂರಿನಲ್ಲಿ ಕಳ್ಳರ ಕೈ ಚಳಕ: ಮನೆ ಮುಂದೆ ನಿಲ್ಲಿಸಿದ ಕಾರುಗಳ ಚಕ್ರಗಳೇ ಮಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.