ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಇಂದು ಬರೋಬ್ಬರಿ 8 ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 281ಕ್ಕೆ ಏರಿಕೆಯಾಗಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಮತ್ತು ಮೃತ ಪ್ರಮಾಣ ದಿನೇ-ದಿನೆ ಏರಿಕೆ ಕಾಣುತ್ತಲೇ ಇದೆ. ಇಂದು 204 ಜನರಿಗೆ ಕೊರೊನಾ ತಗುಲುವ ಮೂಲಕ ಸೋಂಕಿತರ ಸಂಖ್ಯೆ 9,670ಕ್ಕೆ ಏರಿಕೆಯಾಗಿದೆ.
ಇಂದು 213 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 6,971 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 2,418 ಸಕ್ರಿಯ ಪ್ರಕರಣಗಳಿವೆ.