ಧಾರವಾಡ: ಜಿಲ್ಲೆಯಲ್ಲಿ ಇಂದು 234 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹತ್ತು ಸಾವಿರ ಗಡಿ ದಾಟಿದೆ.
ಇಂದು 130 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ 7,236 ಸೋಂಕಿತರು ಮಹಾಮಾರಿ ಗೆದ್ದು ಬಂದಿದ್ದಾರೆ.
ಈವರೆಗೆ ಜಿಲ್ಲೆಯಲ್ಲಿ 289 ಮಂದಿ ಮೃತಪಟ್ಟಿದ್ದಾರೆ. ಸದ್ಯ 2,634 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.