ಧಾರವಾಡ: ಜಿಲ್ಲೆಯಲ್ಲಿ ಹೊಸದಾಗಿ 253 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ 8,387 ಕ್ಕೆ ಏರಿಕೆಯಾಗಿದೆ.
ಇಂದು 9 ಜನ ಸೋಂಕಿಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 258ಕ್ಕೆ ಏರಿಕೆಯಾಗಿದೆ.
ಇವತ್ತು 351 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಇಲ್ಲಿಯವರೆಗೆ ಒಟ್ಟು 5,716 ಜನರು ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 2,413 ಸಕ್ರಿಯ ಪ್ರಕರಣಗಳಿವೆ.