ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ನಿನ್ನೆ ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದೆ. ಇದರ ಬೆನ್ನಲ್ಲೇ ಅವರನ್ನು ಹೆಚ್ಚಿನ ವಿಚಾರಣೆಗೋಸ್ಕರ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ಧಾರವಾಡ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ.
’’ಬಿದ್ದು ಎದ್ದು ಗೆದ್ದು ಬರುವೆನು’’...!; ಇದು ವಿನಯ್ಕುಲಕರ್ಣಿ ಭಾವನಾತ್ಮಕ ಪೋಸ್ಟ್
ನವೆಂಬರ್ 9 ರಂದು ಬೆಳಗ್ಗೆ 11 ಗಂಟೆಗೆ ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಸೂಚನೆ ನೀಡಲಾಗಿದೆ. ಸಿಬಿಐ ಅರ್ಜಿಗೆ ವಿನಯ್ ಪರ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು. ಆದರೆ, ಇದು ವಜಾಗೊಂಡಿದೆ. ಇನ್ನು ದಿನಕ್ಕೆ ಹತ್ತು ನಿಮಿಷ ಸಿಬಿಐ ಅಧಿಕಾರಿಗಳ ಸಮ್ಮುಖದಲ್ಲಿ ಕುಟುಂಬಸ್ಥರ ಭೇಟಿಗೆ ಅವಕಾಶ ಹಾಗೂ ಅನಾರೋಗ್ಯ ಸಮಯದಲ್ಲಿ ಚಿಕಿತ್ಸೆಗೆ ಆಸ್ಪತ್ರೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ನಿನ್ನೆ ಬಂಧಿತರಾಗಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿಯವರನ್ನು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರಿಸಲಾಗಿತ್ತು.