ಧಾರವಾಡ: ಜಿಲ್ಲೆಯಲ್ಲಿ ಇಂದು ಹೊಸದಾಗಿ 311 ಜನರಿಗೆ ಕೊರೊನಾ ಸೋಂಕು ತಗುಲಿದೆ.
ಇಂದು ಪತ್ತೆಯಾದ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12,994 ಕ್ಕೇರಿದೆ.
ಇದುವರೆಗೆ 9,945 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 2,679 ಪ್ರಕರಣಗಳು ಸಕ್ರಿಯವಾಗಿವೆ. 68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದುವರೆಗೆ 370 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.
ಧಾರವಾಡ ಜಿಲ್ಲೆಯನ್ನು ಹೊರತುಪಡಿಸಿ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಾಗಲಕೋಟೆ ಜಿಲ್ಲೆಯ ಕೇಸ್ ಗಳು ಸಹ ಸೇರಿಕೊಂಡಿವೆ.