ETV Bharat / state

₹324 ಕೋಟಿ ವೆಚ್ಚದಲ್ಲಿ ಹುಬ್ಬಳ್ಳಿಯ ಏರ್​ಪೋರ್ಟ್ ಮೇಲ್ದರ್ಜೆಗೇರಿಸಲು ಟೆಂಡರ್ ಪ್ರಕ್ರಿಯೆ ಆರಂಭ: ಪ್ರಹ್ಲಾದ ಜೋಶಿ

324 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳ್ಳಿಯ ಏರ್​ಪೋರ್ಟ್ ಮೇಲ್ದರ್ಜೆಗೇರಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಿಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

Hubli Airport
324 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳ್ಳಿಯ ಏರ್​ಪೋರ್ಟ್ ಮೇಲ್ದರ್ಜೆಗೇರಿಸಲು ಟೆಂಡರ್ ಪ್ರಕ್ರಿಯೆ ಆರಂಭ
author img

By ETV Bharat Karnataka Team

Published : Dec 1, 2023, 2:06 PM IST

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯೆ

ಹುಬ್ಬಳ್ಳಿ: ''ಉತ್ತರ ಕರ್ನಾಟಕ ಭಾಗದ ಪ್ರಮುಖ ವಾಣಿಜ್ಯ ಕೇಂದ್ರವಾದ ಹುಬ್ಬಳ್ಳಿ ವಿಮಾನ‌ ನಿಲ್ದಾಣ ಮೇಲ್ದರ್ಜೆಗೆ ಏರಿಸುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಈಗಿರುವ ಹುಬ್ಬಳ್ಳಿ ವಿಮಾನ ನಿಲ್ದಾಣದ ಸಂಚಾರ ದಟ್ಟಣೆ, ಅವಶ್ಯಕತೆ ಹಾಗೂ ಸಾಮರ್ಥ್ಯದ ಪರಿಮಿತಿಯನ್ನು ವಿಸ್ತರಿಸುವುದು'' ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

''ಹುಬ್ಬಳ್ಳಿ ನಿಲ್ದಾಣದ ಅಗತ್ಯಗಳನ್ನು 2026ರ ನಂತರದ ಸಂಚಾರ ದಟ್ಟಣೆಗೆ ಅನುಗುಣವಾಗಿ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಕಾರ್ಯವನ್ನು ಡಿಸೆಂಬರ್ ಅಂತ್ಯದೊಳಗೆ ಆರಂಭಿಸಬೇಕು'' ಎಂದು ಅವರು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ಈಗಿನ ಸಾಮರ್ಥ್ಯ, ಗಾತ್ರ ಹಾಗೂ ಇತರ ಸೌಲಭ್ಯಗಳ ವಿಸ್ತರಣೆಗಾಗಿ ತಮ್ಮ ಕೋರಿಕೆಯ ಮೇರೆಗೆ ಈಗಾಗಲೇ ಕೇಂದ್ರ ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡಿದೆ. ಈಗ ಒಟ್ಟು 324 ಕೋಟಿ ರೂ. ವೆಚ್ಚದಲ್ಲಿ ಟೆಂಡ‌ರ್ ಪ್ರಕ್ರಿಯೆ ಕೊನೆಗೊಳ್ಳಲಿದೆ. ಡಿಸೆಂಬರ್ ಅಂತ್ಯದ ಒಳಗೆ ಕಾಮಗಾರಿ ಪ್ರಾರಂಭವಾಗುವುದು ಎಂದು ಪ್ರಹ್ಲಾದ ಜೋಶಿ ಮಾಹಿತಿ‌ ನೀಡಿದ್ದಾರೆ.

ಇನ್ನು, 15,950 ಚ.ಮೀ ವಿಸ್ತೀರ್ಣದ ನಿಲ್ದಾಣದಲ್ಲಿ 4 ಏರೋ ಬ್ರಿಜ್ ಸಹಿತ ಏಕಕಾಲಕ್ಕೆ 2,400 ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ, ಮತ್ತಿತರ ಸುಸಜ್ಜಿತ ನಿಲ್ದಾಣವಾಗಲಿದೆ. ಸಮಸ್ತ ಉತ್ತರ ಕರ್ನಾಟಕದ ಹೆಮ್ಮೆಯ ನಿಲ್ದಾಣವಾಗಿ ಹೊರಹೊಮ್ಮಲಿದೆ. ಈ ನಿಲ್ದಾಣ ಪರಿಸರ ಸ್ನೇಹಿಯಾಗಿರಲಿದೆ'' ಎಂದು ತಿಳಿಸಿದರು.

ನೂತನ ಯೋಜನೆಯಂತೆ ಹುಬ್ಬಳ್ಳಿ ವಿಮಾನ ನಿಲ್ದಾಣ ಕಾಮಗಾರಿ ಕುರಿತಂತೆ ಇತ್ತೀಚಿಗೆ ಪ್ರಹ್ಲಾದ ಜೋಶಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವಾರು ವಿಷಯಗಳನ್ನು ಚರ್ಚಿಸಿದ್ದು, ಕೂಡಲೇ ಕಾಮಗಾರಿ ಪ್ರಾರಂಭಿಸುವ ಮೂಲಕ ಗುಣಮಟ್ಟದ ಸೇವೆ ದೊರೆಯಲಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಇದನ್ನೂ ಓದಿ: 'ಸ್ಯಾಮ್​​ ಬಹದ್ದೂರ್': ಪ್ರೇಕ್ಷಕರಿಗೆ ರೋಮಾಂಚಕ ಅನುಭವ ನೀಡಿದ ದೇಶದ ಮೊದಲ ಫೀಲ್ಡ್‌ ಮಾರ್ಷಲ್ ಕಹಾನಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.