ಧಾರವಾಡ: ಇಂದು ಜಿಲ್ಲೆಯಲ್ಲಿ ಹೊಸದಾಗಿ 342 ಜನರಿಗೆ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 12195 ಜನರಿಗೆ ಸೋಂಕು ತಗುಲಿದಂತಾಗಿದೆ.
ಕೊರೊನಾ ಸೋಂಕಿಗೆ ಇಂದು 9 ಜನ ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 346ಕ್ಕೇರಿದೆ.
ಸೋಂಕಿನಿಂದ 203 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 9222 ಜನರು ಗುಣಮುಖರಾದಂತಾಗಿದೆ. ಇನ್ನು ಜಿಲ್ಲೆಯಲ್ಲಿ 2,627 ಸಕ್ರಿಯ ಪ್ರಕರಣಗಳಿವೆ.