ಧಾರವಾಡ : ಕೊರೊನಾ ಸೋಂಕು ಪ್ರಕರಣ ಹೆಚ್ಚುತ್ತಲೇ ಇದ್ದು ಜಿಲ್ಲೆಯಲ್ಲಿಂದು 165 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಹಾಗೂ 6 ಮಂದಿ ಮೃತಪಟ್ಟಿದ್ದಾರೆ.
165 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 3190ಕ್ಕೇರಿಕೆಯಾಗಿದೆ. ಅಲ್ಲದೆ 6 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 95ಕ್ಕೆ ಏರಿದೆ.
56 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ 1222 ಜನರು ಗುಣಮುಖರಾಗಿದ್ದಾರೆ. ಸದ್ಯ 1873 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.