ETV Bharat / state

ಪಶ್ಚಿಮ ಪದವೀಧರ ಕ್ಷೇತ್ರ ವ್ಯಾಪ್ತಿಯ ಜಿಲ್ಲೆಗಳಲ್ಲಿ ಶಾಂತಿಯುತ ಮತದಾನ: ಬಿಸ್ವಾಸ್

author img

By

Published : Oct 28, 2020, 10:48 PM IST

ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ಚುನಾವಣೆ - 2020 ಹಿಂದಿನ ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗಳಿಗೆ ಹೋಲಿಸಿದಾಗ ಅತೀ ಹೆಚ್ಚು ಮತದಾನವಾಗಿದೆ ಎಂದು ಚುನಾವಣಾಧಿಕಾರಿ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ.

Dharwad
ಚುನಾವಣಾಧಿಕಾರಿ ಆಮ್ಲನ್ ಆದಿತ್ಯ ಬಿಸ್ವಾಸ್

ಧಾರವಾಡ: ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಸೇರಿ ಒಟ್ಟು ಶೇ. 70.11 ರಷ್ಟು ಮತದಾನವಾಗಿದ್ದು, ಇದು ಹಿಂದಿನ ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗಳಿಗೆ ಹೋಲಿಸಿದಾಗ ಅತೀ ಹೆಚ್ಚು ಮತದಾನವಾಗಿದೆ ಎಂದು ಚುನಾವಣಾಧಿಕಾರಿ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ.

ಬೆಳಗ್ಗೆ 8 ಗಂಟೆಯಿಂದ ನಿಗದಿಯಂತೆ ನಾಲ್ಕು ಜಿಲ್ಲೆಯ 146 ಮತದಾನ ಕೇಂದ್ರಗಳಲ್ಲಿ ಮತದಾನ ಆರಂಭವಾಯಿತು. ಬೆಳಗ್ಗೆ 8 ಗಂಟೆಯಿಂದ 12 ಗಂಟೆಯವರೆಗೆ ಧಾರವಾಡ ಜಿಲ್ಲೆಯಲ್ಲಿ ಶೇ.26.85, ಹಾವೇರಿ ಜಿಲ್ಲೆಯಲ್ಲಿ ಶೇ.21, ಗದಗ ಜಿಲ್ಲೆಯಲ್ಲಿ ಶೇ.25.17 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.28.35 ಸೇರಿ ಒಟ್ಟು ಶೇ.24.89ರಷ್ಟು ಮತದಾನವಾಗಿದೆ. ಮಧ್ಯಾಹ್ನ 12 ಗಂಟೆಯಿಂದ 02 ಗಂಟೆಯವರೆಗೆ ಧಾರವಾಡ ಜಿಲ್ಲೆಯಲ್ಲಿ ಶೇ.44.02, ಹಾವೇರಿ ಜಿಲ್ಲೆಯಲ್ಲಿ ಶೇ.40.53, ಗದಗ ಜಿಲ್ಲೆಯಲ್ಲಿ ಶೇ.47.67 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.48.12 ಸೇರಿ ಒಟ್ಟು ಶೇ.44.47ರಷ್ಟು ಮತದಾನವಾಗಿದೆ. ಮತ್ತು ಮಧ್ಯಾಹ್ನ 02 ಗಂಟೆಯಿಂದ 05 ಗಂಟೆಯವರೆಗೆ ಸೇರಿದಂತೆ ಒಟ್ಟು ಮತದಾನದ ದಿನದ ಅವಧಿಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಶೇ.68.65, ಹಾವೇರಿ ಜಿಲ್ಲೆಯಲ್ಲಿ ಶೇ.67.89, ಗದಗ ಜಿಲ್ಲೆಯಲ್ಲಿ ಶೇ.74.59 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.71.08 ಸೇರಿ ಒಟ್ಟು ಶೇ.70.11ರಷ್ಟು ಮತದಾನವಾಗಿದೆ ಎಂದು ಅವರು ತಿಳಿಸಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ನೋಂದಾಯಿತರಾದ 21,549 ಮತದಾರರ ಪೈಕಿ ಪುರುಷ 9,867, ಮಹಿಳೆ 4,926 ಸೇರಿದಂತೆ ಒಟ್ಟು ಪದವೀಧರ ಮತದಾರರು 14,793 ಜನರು ಮತ ಚಲಾಯಿಸಿದ್ದಾರೆ. ಒಟ್ಟು ಧಾರವಾಡ ಜಿಲ್ಲೆಯಲ್ಲಿ ಶೇ.68.65 ರಷ್ಟು ಮತದಾನವಾಗಿದೆ.

ಹಾವೇರಿ ಜಿಲ್ಲೆಯಲ್ಲಿ ನೋಂದಾಯಿತರಾದ 23,603 ಮತದಾರರ ಪೈಕಿ ಪುರುಷ 11,699, ಮಹಿಳೆ 4,324 ಸೇರಿದಂತೆ ಒಟ್ಟು ಪದವೀಧರ ಮತದಾರರು 16,023 ಜನರು ಮತ ಚಲಾಯಿಸಿದ್ದಾರೆ. ಒಟ್ಟು ಹಾವೇರಿ ಜಿಲ್ಲೆಯಲ್ಲಿ ಶೇ.67.89 ರಷ್ಟು ಮತದಾನವಾಗಿದೆ.

ಗದಗ ಜಿಲ್ಲೆಯಲ್ಲಿ ನೋಂದಾಯಿತರಾದ 15,978 ಮತದಾರರ ಪೈಕಿ ಪುರುಷ 8,579, ಮಹಿಳೆ 3,339 ಸೇರಿದಂತೆ ಒಟ್ಟು ಪದವೀಧರ ಮತದಾರರು 11,918 ಜನರು ಮತ ಚಲಾಯಿಸಿದ್ದಾರೆ. ಒಟ್ಟು ಗದಗ ಜಿಲ್ಲೆಯಲ್ಲಿ ಶೇ.74.59 ರಷ್ಟು ಮತದಾನವಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ನೋಂದಾಯಿತರಾದ 13,148 ಮತದಾರರ ಪೈಕಿ ಪುರುಷ 5,519, ಮಹಿಳೆ 3,826 ಹಾಗೂ ಇತರೇ 01 ಸೇರಿದಂತೆ ಒಟ್ಟು ಪದವೀಧರ ಮತದಾರರು 9,346 ಜನರು ಮತ ಚಲಾಯಿಸಿದ್ದಾರೆ. ಒಟ್ಟು ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.71.08 ರಷ್ಟು ಮತದಾನವಾಗಿದೆ.

ಮತಕ್ಷೇತ್ರ ವ್ಯಾಪ್ತಿಯ 4 ಜಿಲ್ಲೆಗಳು ಸೇರಿದಂತೆ ಒಟ್ಟು 74,278 ನೋಂದಾಯಿತ ಮತದಾರರಿದ್ದು, ಈ ಪೈಕಿ 35,664 ಪುರುಷ ಹಾಗೂ 16,415 ಮಹಿಳಾ ಮತದಾರರು ಸೇರಿದಂತೆ ಒಟ್ಟು 52,080 ಮತದಾರರು ಇಂದಿನ ಮತದಾನದಲ್ಲಿ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದು, ಒಟ್ಟು ಶೇ.70.11 ರಷ್ಟು ಮತದಾನವಾಗಿದೆ ಎಂದು ಅವರು ತಿಳಿಸಿದ್ದಾರೆ.

ಮತಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದು ಕಂಡು ಬಂದಿದೆ. ಮತದಾರರಲ್ಲಿ ಜಾಗೃತಿ ಮೂಡಿಸಲು ಕೈಗೊಂಡ ಕ್ರಮಗಳು ಮತ್ತು ಅಭ್ಯರ್ಥಿಗಳ ಸಹಕಾರದಿಂದ ಈ ಯಶಸ್ಸು ಸಾಧ್ಯವಾಗಿದೆ. ಮತಕ್ಷೇತ್ರ ವ್ಯಾಪ್ತಿಯಲ್ಲಿ ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಶಾಂತಿಯುತವಾಗಿ ಮತದಾನವಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಮತದಾನ ಹೆಚ್ಚಳವಾಗಲು ವಿಶೇಷವಾಗಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಅವರು ನೂತನ ತಂತ್ರಜ್ಞಾನ ಬಳಕೆ ಮಾಡಿ ಪ್ರತಿ ಮತದಾರರಿಗೆ ಎಸ್‍ಎಂಎಸ್ ಮೂಲಕ ಮತದಾನ ಕೇಂದ್ರದ ಮಾರ್ಗ ತೋರಿಸುವ ಗೂಗಲ್ ಮ್ಯಾಪ್, ಮತದಾನ ಕೇಂದ್ರದಲ್ಲಿ ಮಾಡಿರುವ ಕೋವಿಡ್ ಮುಂಜಾಗೃತಾ ಕ್ರಮಗಳು, ಚುನಾವಣೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಮತ್ತು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ವೆಬ್‍ಸೈಟ್ ಲಿಂಕ್ ಬಳಸಿ ನೇರವಾಗಿ ಮತದಾರ ಸಂಪರ್ಕಿಸಲು ಅನುಕೂಲವಾಗುವಂತೆ ಅವರಿಗೆ ಅಗತ್ಯ ಮಾಹಿತಿಯನ್ನು ತಲುಪಿಸಿದ್ದು, ಮತದಾರರಲ್ಲಿ ಹೆಚ್ಚಿನ ಜಾಗೃತಿ, ಆತ್ಮವಿಶ್ವಾಸ ಮೂಡಲು ಕಾರಣವಾಯಿತು. ಇತರ ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲಾ ವ್ಯಾಪ್ತಿಯ ಮತದಾರರಲ್ಲಿ ಜಾಗೃತಿ ಮೂಡಿಸಿರುವುದು ಹೆಚ್ಚು ಮತದಾನವಾಗಲು ಕಾರಣವಾಯಿತು ಎಂದು ಅವರು ತಿಳಿಸಿದ್ದಾರೆ.

ಹೋಂ ಐಸೋಲೇಷನ್​ನಲ್ಲಿದ್ದ ಓರ್ವರು ಹಾಗೂ ಕೋವಿಡ್ ಕೇರ್ ಸೆಂಟರಿನಲ್ಲಿ ಇದ್ದ ಓರ್ವರು ಮತದಾನ ಮಾಡಿದರು. ಇವರು ಮತಗಟ್ಟೆಗೆ ಬಂದು ಹೋಗಲು ವ್ಯವಸ್ಥೆ ಕಲ್ಪಿಸಲಾಗಿತ್ತು. ಮತದಾನದ ನಂತರ ಮತಗಟ್ಟೆಯನ್ನು ಪುನಃ ಸಂಪೂರ್ಣ ಸ್ಯಾನಿಟೈಸ್ ಮಾಡಲಾಯಿತು ಎಂದು ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಎಸ್.ಎಂ. ಹೊನಕೇರಿ ಹೇಳಿದ್ದಾರೆ.

ಇನ್ನು ಕೋವಿಡ್-19 ರ ಹಿನ್ನೆಲೆಯಲ್ಲಿ ಎಲ್ಲ ಮತಗಟ್ಟೆಗಳಲ್ಲಿ ವೈದ್ಯಕೀಯ ಸಿಬ್ಬಂದಿಯಿಂದ ತಪಾಸಣೆ, ಸ್ಯಾನಿಟೈಸರ್, ಮಾಸ್ಕ್, ಹ್ಯಾಂಡ್‍ಗ್ಲೌಸ್, ಫೇಸ್‍ಸೀಲ್ಡ್ ಬಳಕೆ ಮತ್ತು ಸಾಮಾಜಿಕ ಅಂತರದ ವ್ಯವಸ್ಥೆ ಮಾಡಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.